ಮಡಿಕೇರಿ, ಆ. ೨೧: ತಾಲೂಕಿನ ೩ ಅಂಗನವಾಡಿ ಕಾರ್ಯಕರ್ತೆ ಹಾಗೂ ೯ ಅಂಗನವಾಡಿ ಸಹಾಯಕಿಯರು, ಸೋಮವಾರಪೇಟೆ ತಾಲೂಕಿನ ೧೬ ಅಂಗನವಾಡಿ ಸಹಾಯಕಿಯರು ಮತ್ತು ಪೊನ್ನಂಪೇಟೆ ತಾಲೂಕಿನ ೯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ೨೫ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಆನ್ಲೈನ್ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೧೫ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಕಾರ್ಯಕರ್ತೆ ಹುದ್ದೆಗೆ ೧೦ನೇ ತರಗತಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ ೪ ರಿಂದ ೯ ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು. ೧೮ ರಿಂದ ೩೫ ವರ್ಷ ವಯೋಮಿತಿಯೊಳಗಿರುವ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.
ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ವಿಶೇಷಚೇತನ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ೧೦ ವರ್ಷಗಳ ಸಡಿಲಿಕೆ ಇರುತ್ತದೆ. ಆದರೆ ಸಹಾಯಕಿ ಹುದ್ದೆಗೆ ವಿಶೇಷಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್ಸೈಟ್ ತಿತಿತಿ.ಚಿಟಿgಚಿಟಿತಿಚಿಜiಡಿeಛಿಡಿuiಣ. ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿಯನ್ನು ಭರ್ತಿ ಮಾಡಬಹುದಾಗಿದೆ. ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗಿದ್ದು, ಇತರೇ ಯಾವುದೇ ರೂಪದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ-೦೮೨೭೨-೨೯೮೩೭೯, ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ-೭೪೦೬೨೯೬೬೪೫, ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ-೦೮೨೭೬-೨೮೨೨೮೧, ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ-೦೮೨೭೪-೨೪೯೦೧೦ ನ್ನು ದೂರವಾಣಿ ಸಂಖ್ಯೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎನ್. ಮಂಜುನಾಥ್ ತಿಳಿಸಿದ್ದಾರೆ.