ಶನಿವಾರಸಂತೆ, ಆ. ೨೧: ಪಟ್ಟಣದ ಭಾರತಿ ವಿದ್ಯಾಸಂಸ್ಥೆ ಪಿಯು ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಕಲೋತ್ಸವ ಕಾರ್ಯಕ್ರಮವನ್ನು ಗ್ರಾ.ಪಂ. ಅಧ್ಯಕ್ಷೆ ಫರ್ಜಾನಾ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಕಲಾ ಪ್ರತಿಭೆಗಳನ್ನು ಅನಾವರಣಗೊಳಿಸುವ ಶಿಕ್ಷಣ ಇಲಾಖೆಯ ಬಹುನಿರೀಕ್ಷಿತ ಕಾರ್ಯಕ್ರಮ ಕಲೋತ್ಸವವಾಗಿದ್ದು, ಗ್ರಾಮೀಣ ಪ್ರತಿಭೆಗಳು ಬೆಳಕಿಗೆ ಬರುತ್ತವೆ ಎಂದರು.
ವಿದ್ಯಾಸAಸ್ಥೆ ಅಧ್ಯಕ್ಷ ಎಚ್.ಪಿ. ಶೇಷಾದ್ರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಜಗನ್ ಪಾಲ್, ಸದಸ್ಯರು, ಶಿಕ್ಷಣ ಕ್ಷೇತ್ರ ಸಮನ್ವಯಾಧಿಕಾರಿ ಹೇಮಂತ್, ಮುಖ್ಯ ಶಿಕ್ಷಕರಾದ ನರಸಿಂಹ ಮೂರ್ತಿ, ಸೆಬಾಸ್ಟಿಯನ್ ಮೈಕೆಲ್, ಅಶ್ವಥ್, ಸುಜಲಾದೇವಿ, ದೇವರಾಜಪ್ಪ, ಶಿವಪ್ರಕಾಶ್, ಶಿಕ್ಷಕ ಸಿ.ಆರ್. ಗೋಪಾಲ್ ಹಾಜರಿದ್ದರು. ವಿವಿಧ ಪ್ರೌಢಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಬಹುಮಾನ ವಿತರಿಸಲಾಯಿತು.