ಮಡಿಕೇರಿ, ಆ.೨೧: ರಾಜ್ಯದಲ್ಲಿ ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಹಿಂದುಳಿದ ವರ್ಗಗಳು ಹಾಗೂ ಇತರೆ ಸಣ್ಣ ಸಣ್ಣ ಸಮಾಜಗಳನ್ನು ಗುರುತಿಸಿ ಮೇಲೆತ್ತಲು ಶ್ರಮಿಸಿದ ಕೀರ್ತಿ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರAಜನ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ಪರಿವರ್ತನೆಯ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ೧೦೭ನೇ ಜನ್ಮ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬಡವರ ಬಗ್ಗೆ ಸದಾ ಸಾಮಾಜಿಕ ಕಳಕಳಿ ಹೊಂದಿದ್ದರು, ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದರು. ಬಡವರ ಧ್ವನಿಯಾಗಿ ಹಿಂದುಳಿದ ವರ್ಗದವರ ಕಣ್ಮಣಿಯಾಗಿ ಕೆಲಸ ಮಾಡಿದರು. ಜನಪ್ರತಿನಿಧಿಗಳು ಜನರ ಸೇವಕರಾಗಿ ಕಾರ್ಯನಿರ್ವಹಿಸುತ್ತಾರೆ. ಆ ನಿಟ್ಟಿನಲ್ಲಿ ಎಲ್ಲರನ್ನು ಒಳಗೊಂಡು ಸಮಾಜಮುಖಿಯಾಗಿ ಕಾರ್ಯನಿರ್ವಹಿಸುವುದು ಅತೀ ಮುಖ್ಯವಾಗಿದೆ. ಅಂತಹ ಸಾಲಿಗೆ ಡಿ.ದೇವರಾಜ ಅವರು ಸೇರುತ್ತಾರೆ ಎಂದು ಎಂ.ಪಿ.ಅಪ್ಪಚ್ಚುರAಜನ್ ಅವರು ಹೇಳಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಶ್ರೀಧರ್ ಹೆಗಡೆ ಅವರು ಮಾತನಾಡಿ ೭೦ ರ ದಶಕದಲ್ಲಿ ಅರಸು ಅವರು ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಕಾರ್ಯಕ್ರಮಗಳು ಇಂದಿನ ಯುವಜನರು ಅನುಭವಿಸುತ್ತಿದ್ದಾರೆ ಎಂದರು. ಡಿ.ದೇವರಾಜ ಅರಸು ಅವರು ಸಾಮಾಜಿಕ ನ್ಯಾಯಕ್ಕೆ ಭದ್ರಬುನಾದಿ ಹಾಕಿದರು. ೧೯೭೩ ರಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ಮರುನಾಮಕರಣ ಮಾಡಿದ ಕೀರ್ತಿ ಡಿ.ದೇವರಾಜು ಅರಸು ಅವರಿಗೆ ಸಲ್ಲುತ್ತದೆ ಎಂದು ಅವರು ಹೇಳಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಡಿ.ದೇವರಾಜ ಅರಸು ಅವರು ಸರ್ವರಿಗೂ ಸಮಬಾಳು-ಸಮಪಾಲು ನೀಡಲು ಪ್ರಯತ್ನಿಸಿದರು. ಅವರ ಆಡಳಿತ ಅವಧಿಯಲ್ಲಿನ ಕಾರ್ಯಗಳು ಜನಮೆಚ್ಚುಗೆಗೆ ಪಾತ್ರವಾಗಿವೆ ಎಂದು ನುಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸು ಅವರು ಕರ್ನಾಟಕ ರಾಜ್ಯವನ್ನು ಪ್ರಗತಿಪಥದತ್ತ ಕೊಂಡೊಯ್ಯಲು ಶ್ರಮಿಸಿದ ದೀಮಂತ ನಾಯಕ ಎಂದು ವರ್ಣಿಸಿದರು. ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ನೀಡಲಾಗುವ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಕೊಡಗು ಜಿಲ್ಲೆಯ ವಿಕಾಸ ಜನಸೇವಾ ಟ್ರಸ್ಟ್ನ ರಮೇಶ್ ಅವರಿಗೆ ಪ್ರಧಾನ ಮಾಡಲಾಯಿತು. ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದು ಮಾತನಾಡಿದ ರಮೇಶ್ ಅವರು ವಿಕಾಸ ಜನಸೇವಾ ಟ್ರಸ್ಟ್ ನೊಂದವರಿಗೆ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಮಡಿಕೇರಿಯಿಂದ ಕುಶಾಲನಗರಕ್ಕೆ ವಿಕಾಸ ಜನಸೇವಾ ಟ್ರಸ್ಟ್ನ್ನು ಸ್ಥಳಾಂತರಿಸಲಾಗಿದ್ದು, ಸಂಸ್ಥೆಯಲ್ಲಿ ೨೨ ಮಂದಿಗೆ ಊಟೋಪಚಾರ ಕಲ್ಪಿಸಲಾಗುತ್ತದೆ. ಬಡವರಿಗೆ, ನಿರ್ಗತಿಕರಿಗೆ ಶಿಕ್ಷಣ, ಆರೋಗ್ಯ ಕಲ್ಪಿಸಲು ಪ್ರಯತ್ನಿಸಲಾಗುತ್ತದೆ. ಮಾನಸಿಕ ಅಸ್ವಸ್ಥರು ಹೀಗೆ ಹಲವು ಜನರಿಗೆ ಆಶ್ರಯವಾಗಿ ಕಾರ್ಯನಿರ್ವಹಿಸಲಾಗುತ್ತದೆ ಎಂದು ಅವರು ಹೇಳಿದರು.
ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಗೆ ಬರುವ ವಸತಿ ಶಾಲೆಗಳು ಮತ್ತು ವಸತಿ ನಿಲಯಗಳಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಕಾಲೇಜಿನ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಆಗಸ್ಟ್, ೨೧ ರಂದು ಜಿಲ್ಲಾ ಮಟ್ಟದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕಿದೆ. ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ಯೋಗ ಹಾಗೂ ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಬೇಕಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣೆ, ಆಗಸ್,್ಟ ೨೨ ರಂದು ಶಾಲಾ ಮಕ್ಕಳಿಗೆ ಅರಣ್ಯದ ಮಹತ್ವದ ಬಗ್ಗೆ ತಿಳುವಳಿಕೆ ಮತ್ತು ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ರೆಹಾನಾ ಸುಲ್ತಾನಾ ಇತರರು ಇದ್ದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ಸ್ವಾಗತಿಸಿದರು. ಆಲೂರು ಸಿದ್ದಾಪುರ ವಸತಿ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಪ್ರಾಂಶುಪಾಲರಾದ ಭಾರತಿ ನಿರೂಪಿಸಿದರು. ಲೋಕೇಶ್ ವಂದಿಸಿದರು. ಜನ್ಮ ದಿನಾಚರಣೆ ಪ್ರಯುಕ್ತ ಹಿಂದುಳಿದ ವರ್ಗಗಳ ವಿವಿಧ ಕಾಯಕ ಸಮಾಜದವರ ವಸ್ತುಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶಾಸಕರಾದ ಎಂ.ಪಿ.ಅಪ್ಪಚ್ಚುರAಜನ್ ಅವರು ಚಾಲನೆ ನೀಡಿದರು.
ಕೊಡಗು ಜಿಲ್ಲಾ ಕುಲಾಲ ಕುಂಬಾರ ಮಡಿಕೆ ತಯಾರಿಕ ಸಂಘದ ಪ್ರತಿನಿಧಿಗಳಿಂದ ಮಡಿಕೆ ತಯಾರು ಮಾಡುವ ವಿಧಾನ ಆಕರ್ಷಣೀಯವಾಗಿತ್ತು. ನಗರಸಭೆಯ ವತಿಯಿಂದ ಒಣಕಸ, ಹಸಿಕಸ ಬೇರ್ಪಡಿಸುವುದು, ಪ್ಲಾಸ್ಟಿಕ್ ಬಳಸದಿರುವುದು, ಅಡಿಕೆ ತಟ್ಟೆ, ಮತ್ತಿತರವನ್ನು ಬಳಸುವುದು, ಸಾಂಬಾರು ಪದಾರ್ಥಗಳು, ತರಕಾರಿ, ಹಣ್ಣು, ಮೀನುಗಾರಿಕೆಗೆ ಸಂಬAಧಿಸಿದ ಕಾರ್ಯಕ್ರಮಗಳು, ಕೃಷಿ, ಕಾರ್ಮಿಕ ಹಾಗೂ ಜವಳಿ ಮತ್ತು ಕೈಮಗ್ಗ ಇಲಾಖೆ ವ್ಯಾಪ್ತಿಯ ಮಳಿಗೆಗಳು ಗಮನ ಸೆಳೆದವು.
ಹಾಗೆಯೇ ಡಿ.ದೇವರಾಜ ಅರಸು ಅವರ ದೂರದೃಷ್ಟಿ ಆಡಳಿತ, ಜನರೊಂದಿಗಿನ ಸ್ಪಂದನೆ, ಮೊರಾರ್ಜಿ ದೇಸಾಯಿ ಅವರೊಂದಿಗಿನ ಒಡನಾಟ, ಜನರ ಸಂಕಷ್ಟ ಆಲಿಸುವುದು, ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು... ಮತ್ತಿತರ ಛಾಯಾಚಿತ್ರ ಪ್ರದರ್ಶನವು ಗಮನ ಸೆಳೆಯಿತು.