ಮಡಿಕೇರಿ, ಆ.೨೧: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಬಾಲಭವನ ಸಮಿತಿ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ತಾ. ೨೩ ರಂದು ಬೆಳಗ್ಗೆ ೧೧ ಗಂಟೆಗೆ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರö್ಯ ದಿನಾಚರಣೆ ಪ್ರಯುಕ್ತ ೫-೮, ೯-೧೨, ೧೩-೧೬ ವರ್ಷದವರೆಗೆ ಮೂರು ಗುಂಪುಗಳಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಥಮ ೫೦೦ ರೂ., ದ್ವಿತೀಯ ೪೦೦ ರೂ. ಮತ್ತು ತೃತೀಯ ೩೦೦ ರೂ. ಬಹುಮಾನ ನೀಡಲಾಗುವುದು. ಸ್ಪರ್ಧೆಗೆ ಮಡಿಕೇರಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಎಲ್ಲಾ ಶಾಲೆಯ ಮಕ್ಕಳು ಪಾಲ್ಗೊಳ್ಳುವಂತೆ ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷಿö್ಮ ಅವರು ತಿಳಿಸಿದ್ದಾರೆ.