ಮಡಿಕೇರಿ, ಆ. ೨೧: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ೨೦೨೨-೨೩ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಆನ್‌ಲೈನ್ ಮೂಲಕ ಞಚಿಛಿಜಛಿ.ಞಚಿಡಿಟಿಚಿಣಚಿಞಚಿ. gov.iಟಿ ನಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೧೧ ಕೊನೆಯ ದಿನವಾಗಿದೆ. ಮಹಿಳೆಯರಿಗೆ ಶೇ.೩೩ ಹಾಗೂ ವಿಶೇಷಚೇತನರಿಗೆ ಶೇ.೫ ರಷ್ಟು ಮೀಸಲಾತಿ ಇರುತ್ತದೆ. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ೯೪೪೮೪೫೧೧೧೧ (ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರವರೆಗೆ ಸಂಪರ್ಕಿಸ ಬಹುದು) ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂರವಾಣಿ: ೦೮೨೭೨-೨೨೧೬೫೬ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.