ಸಿದ್ದಾಪುರ, ಆ. ೨೧: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಿತಿಮತಿ ಅರಣ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಬಾಡಗ ಬಾಣಂಗಾಲ ಘಟ್ಟದಳ್ಳ, ಕೊಡಗು, ಮೇಕೂರು, ಹೊಸ್ಕೇರಿ ಗ್ರಾಮದ ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟು ದಾಂಧಲೆ ನಡೆಸುತ್ತಾ ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿದೆ. ಮಿತಿ ಮೀರಿದ ಕಾಡಾನೆಗಳ ಹಾವಳಿಯಿಂದಾಗಿ ಕಾಫಿ ಬೆಳೆಗಾರರು, ಕಾರ್ಮಿಕರು ಭಯಭೀತರಾಗಿದ್ದಾರೆ.

ಕಾಡಾನೆಗಳ ಹಾವಳಿಯನ್ನು ತಡೆಗಟ್ಟಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರದಂದು ತಿತಿಮತಿ ವಲಯಾರಣ್ಯಾಧಿಕಾರಿ ಬೀಡು ಬಿಟ್ಟು ದಾಂಧಲೆ ನಡೆಸುತ್ತಾ ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿದೆ. ಮಿತಿ ಮೀರಿದ ಕಾಡಾನೆಗಳ ಹಾವಳಿಯಿಂದಾಗಿ ಕಾಫಿ ಬೆಳೆಗಾರರು, ಕಾರ್ಮಿಕರು ಭಯಭೀತರಾಗಿದ್ದಾರೆ.

ಕಾಡಾನೆಗಳ ಹಾವಳಿಯನ್ನು ತಡೆಗಟ್ಟಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರದಂದು ತಿತಿಮತಿ ವಲಯಾರಣ್ಯಾಧಿಕಾರಿ ಕಾರ್ಯಾಚರಣೆ ಸಂದರ್ಭ ನಾಲ್ಕು ಮರಿಯಾನೆಗಳು ಸೇರಿದಂತೆ ೧೨ಕ್ಕೂ ಅಧಿಕ ಕಾಡಾನೆಗಳು ಕಂಡುಬAದವು ಎಂದು ಅರಣ್ಯ ಇಲಾಖಾಧಿಕಾರಿಗಳು ತಿಳಿಸಿದ್ದಾರೆ. ಕೆಲವು ಕಾಡಾನೆಗಳು ಗುಂಪಿನಿAದ ಬೇರ್ಪಟ್ಟು ಕಾಫಿ ತೋಟದೊಳಗೆ ಸುತ್ತಾಡುತ್ತಿದ್ದವು. ಅವುಗಳನ್ನು ಕೂಡ ಕಾರ್ಯಾಚರಣೆ ನಡೆಸಿ ಅರಣ್ಯಕ್ಕೆ ಓಡಿಸಲಾಯಿತು. ಬಾಡಗ-ಬಾಣಂಗಾಲ ಗ್ರಾಮದಲ್ಲಿ ಕಾಡಾನೆಗಳು ಹಾಗೂ ಇತರ ವನ್ಯ ಪ್ರಾಣಿಗಳ ಹಾವಳಿಯೂ ಇದೆ. ಕಳೆದ ಕೆಲವು ತಿಂಗಳ ಹಿಂದೆ ಹುಲಿಯೊಂದು ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿತ್ತು.

-ವಾಸು