ನಾಪೋಕ್ಲು, ಆ. ೨೧: ಸ್ಥಳೀಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಇಲ್ಲಿಯ ಕೆಪಿಎಸ್ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಜರುಗಿತು. ಶಾಲಾ ಅಭಿವೃದ್ಧಿ ಸಮಿತಿ ಉಪಸಮಿತಿ ಅಧ್ಯಕ್ಷ ನೂರಂಬಾಡ ಉದಯಶಂಕರ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಕರ ಸಹಕಾರದಿಂದ ಜ್ಞಾನಾರ್ಜನೆ ಮಾಡುವುದರ ಮೂಲಕ ಮಾನಸಿಕ ಸಾಮರಸ್ಯ ವೃದ್ಧಿಗೂ ನೆರವಾಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಮುಂದೆ ಬರಬೇಕು ಎಂದರು.

ಪಬ್ಲಿಕ್ ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಎ. ಹ್ಯಾರಿಸ್ ಕಾರ್ಯಕ್ರಮ ಉದ್ಘಾಟನೆಗೊಳಿಸಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಉಪಸಮಿತಿ ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ ಶಿಕ್ಷಣ ಸಂಯೋಜಕ ಮಾರುತಿ ಅರೆರಾ ನಾಪೋಕ್ಲು ಕ್ಲಸ್ಟರ್ ಸಿಆರ್‌ಪಿ ಮಂಜುಳಾ ಚಿತ್ರಾಪುರ, ಸರಸ್ವತಿ, ಉಷಾ, ನಿಶಾ ಹಾಗೂ ವಿವಿಧ ಶಾಲಾ ಶಿಕ್ಷಕರು, ಪೋಷಕರ ಉಪಸ್ಥಿತಿಯಲ್ಲಿ ನಾಪೋಕ್ಲು ಕ್ಲಸ್ಟರ್ ವ್ಯಾಪ್ತಿಯ ೧೮ ಶಾಲೆಗಳ ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.