ಶ್ರೀಮಂಗಲ, ಆ. ೨೧: "ತಿಂಗಕೊರ್ ಮೊಟ್ಟ್ ತಲಕಾವೇರಿ" ಸಂಕಲ್ಪದAತೆ ೨೦ನೇ ತಿಂಗಳ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗದಿಂದ ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸಿದ್ದ ಕೊಡವರು ತಲಕಾವೇರಿಯಲ್ಲಿ ಕಾವೇರಿ ಮಾತೆ, ಅಗಸ್ತö್ಯ ದೇವಸ್ಥಾನ, ಭಾಗಮಂಡಲದಲ್ಲಿ ಭಗಂಡೇಶ್ವರ ಮತ್ತು ಕಕ್ಕಬ್ಬೆಯ ಪಾಡಿ ಇಗ್ಗುತಪ್ಪ ದೇವಸ್ಥಾನದಲ್ಲಿ ಭಾನುವಾರ ಸಾಮೂಹಿಕ ಪೂಜೆ ಸಲ್ಲಿಸಿದರು.