ಮಡಿಕೇರಿ, ಆ.೨೧: ಭಾರತ್ ಸ್ಕೌಟ್ ಮತ್ತು ಗೈಡ್ಸ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ಕೊಡಗು ಜಿಲ್ಲಾ ಸಂಸ್ಥೆ, ಸಮಗ್ರ ಗಿರಿಜನ ಯೋಜನಾ ಅಭಿವೃದ್ಧಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಲಯನ್ಸ್ ಕ್ಲಬ್, ಕಾರ್ಮಿಕ ಇಲಾಖೆ, ಹಾಗೂ ಪೊನ್ನಂಪೇಟೆ ಸ್ಥಳೀಯ ಸಂಸ್ಥೆ ಸಹಯೋಗದಲ್ಲಿ ತಾ. ೨೨ ರಂದು (ಇಂದು) ಬೆಳಗ್ಗೆ ೧೦ ಗಂಟೆಗೆ ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಕೆ.ಬಿ. ಪ್ರಸಾದ್, ತಿತಿಮತಿ ಗ್ರಾ.ಪಂ.ಅಧ್ಯಕ್ಷರಾದ ಎಚ್.ಕೆ. ಆಶಾ, ಶಾಸಕರಾದ ಕೆ.ಜಿ. ಬೋಪಯ್ಯ, ಭಾ.ಸ್ಕೌ.ಗೈ. ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ. ಬೇಬಿ ಮ್ಯಾಥ್ಯು, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ, ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೇಶವ ಕಾಮತ್, ಇತರರು ಪಾಲ್ಗೊಳ್ಳಲಿದ್ದಾರೆ.