ಮಡಿಕೇರಿ, ಆ. ೨೨: ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕೊಡಗು ಭೇಟಿ ಸಂದರ್ಭ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬAಧಿಸಿದAತೆ ಸಿದ್ದರಾಮಯ್ಯ ಅವರ ಕರೆಯ ಮೇರೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜನ ಜಾಗೃತಿ ಕೊಡಗು ನಡಿಗೆ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದರೆ, ಇದಕ್ಕೆ ಪ್ರತಿಯಾಗಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಜನ ಜಾಗೃತಿ ಸಮಾವೇಶ ಏರ್ಪಡಿಸಲಾಗಿದೆ. ಎರಡೂ ಕಾರ್ಯಕ್ರಮಗಳೂ ತಾ.೨೬ರ ಶುಕ್ರವಾರದಂದು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಆಯೋಜಿತಗೊಂಡಿದ್ದು, ಉಭಯ ಪಕ್ಷಗಳಿಂದಲೂ ಪೂರ್ವ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಜನ ಜಾಗೃತಿ ನಡಿಗೆ

ಕಳೆದ ತಾ.೧೮ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗುಡ್ಡೆಹೊಸೂರು ಬಳಿ ಪ್ರತಿಭಟನೆ ನಡೆದಾಗ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಸಂಬAಧ ಪೊಲೀಸರು ಓರ್ವನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದರು. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ತಾ.೨೬ರಂದು ಮತ್ತೆ ಜಿಲ್ಲೆಗೆ ಆಗಮಿಸಲಿದ್ದು, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಬಗ್ಗೆ ಕರೆ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜನ ಜಾಗೃತಿ ಕೊಡಗು ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಪಕ್ಷದ ಮೊಟ್ಟೆ ದಾಳಿ ಸಂಸ್ಕೃತಿ ವಿರುದ್ಧ ಮತ್ತು ಕಳೆದ ೨೦ ವರ್ಷಗಳಿಂದ ಯಾವದೇ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿ ನಾಯಕರುಗಳ ವಿರುದ್ಧ ಜನಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ ಶಾಂತಿ ನೆಲೆಸುವಂತೆ ಮಾಡಲು ತಾ.೨೬ರಂದು ಜನ ಜಾಗೃತಿ ಕೊಡಗು ನಡೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕರುಗಳಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಯು.ಟಿ ಖಾದರ್, ಗೋವಿಂದರಾಜ್, ಎಂ.ಬಿ. ಪಾಟಿಲ್, ಆರ್.ಧ್ರುವನಾರಾಯಣ್, ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ ಮುಂತಾದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ತಾ. ೨೬ರಂದು ಜಿಲ್ಲೆಯಾದ್ಯಂತ ಎಲ್ಲ ಕಡೆಗಳಿಂದಲೂ ಆಗಮಿಸುವ ಕಾರ್ಯಕರ್ತರು ಬೆಳಿಗ್ಗೆ ೧೦.೩೦ ಗಂಟೆಗೆ ಮಡಿಕೇರಿಯ ಸುದರ್ಶನ ವೃತ್ತದ ಬಳಿ ಜಮಾವಣೆಗೊಳ್ಳಲಿದ್ದಾರೆ. ನಂತರ ಅಲ್ಲಿಂದ ಮುಖ್ಯ ರಸ್ತೆಗಳಲ್ಲಿ ನಡಿಗೆ ಮೂಲಕ ಜಿಲ್ಲಾ ಪೊಲೀಸ್

(ಮೊದಲ ಪುಟದಿಂದ) ವÀರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಅಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಜನ ಜಾಗೃತಿ ಸಮಾವೇಶ

ಕಾಂಗ್ರೆಸ್ ಪಕ್ಷದ ಜನ ಜಾಗೃತಿ ನಡಿಗೆಗೆ ಪ್ರತಿಯಾಗಿ ಬಿಜೆಪಿಯಿಂದಲೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಟಿಪ್ಪು ಜಯಂತಿಯನ್ನು ಆಚರಣೆಗೆ ತಂದು ನಾಲ್ವರು ಪ್ರಾಣ ಕಳೆದುಕೊಂಡಿರುವದು, ದೇಶ ರಕ್ಷಣೆಯಲ್ಲಿ ಮುಂಚೂಣಿಯಲ್ಲಿರುವ ಕೊಡವರನ್ನು ಗೋಮಾಂಸ ಭಕ್ಷಕರೆಂದು ಅವಹೇಳನ ಮಾಡಿರುವದು, ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧ ಮತ್ತು ಮತಾಂತರ ನಿಷೇಧ ಕಾನೂನು ರದ್ದುಪಡಿಸುವದಾಗಿ ಹೇಳಿ ಹಿಂದೂಗಳ ಮನಸ್ಸಿಗೆ ನೋವುಂಟು ಮಾಡಿರುವದು, ಸ್ವಾತಂತ್ರö್ಯ ಹೋರಾಟಗಾರ ವೀರ ಸಾರ್ವಕರ್ ಭಾವಚಿತ್ರವನ್ನು ಹಾಕಬಾರದೆಂದು ಹೇಳಿ ಮತ್ತೊಮ್ಮೆ ದೇಶ ವಿಭಜನೆಗೆ ಪ್ರೇರಣೆ ನೀಡುತ್ತಿರುವವರು, ರಾಜ್ಯಕ್ಕೆ ಬೆಂಕಿ ಹಚ್ಚುತ್ತೇವೆ ಎಂದು ಹೇಳಿ ಅಶಾಂತಿಗೆ ಪ್ರೋತ್ಸಾಹಿಸುತ್ತಿರುವವರ ವಿರುದ್ಧ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಜಿಲ್ಲೆಯಾದ್ಯಂತ ಸೇರಿದಂತೆ ಎಲ್ಲ ಕಡೆಗಳಿಂದ ಕಾರ್ಯಕರ್ತರು, ರಾಜ್ಯ ಹಾಗೂ ರಾಷ್ಟç ಮಟ್ಟದ ನಾಯಕರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವದಾಗಿ ತಿಳಿದುಬಂದಿದೆ.

ತಾ.೨೬ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲೆಯ ಐದೂ ತಾಲೂಕುಗಳ ಕಾರ್ಯಕರ್ತರು ಆಯಾ ತಾಲೂಕು ಕೇಂದ್ರಗಳಲ್ಲಿ ಒಟ್ಟು ಸೇರಿ ನಂತರ ಜಿಲ್ಲಾ ಕೇಂದ್ರ ಮಡಿಕೇರಿಗೆ ಆಗಮಿಸಲಿದ್ದಾರೆ. ೧೧ ಗಂಟೆಗೆ ಗಾಂಧಿ ಮೈದಾನದಲ್ಲಿ ಸಮಾವೇಶಗೊಳ್ಳಲಿದ್ದು, ನಂತರ ಜನ ಜಾಗೃತಿ ಸಮಾವೇಶ ನಡೆಯಲಿದೆ.

ಪೊಲೀಸ್ ಕಟ್ಟೆಚ್ಚರ

ಎರಡೂ ರಾಷ್ಟಿçÃಯ ಪಕ್ಷಗಳು ಒಂದೇ ದಿವಸದಂದು, ಒಂದೇ ಕಡೆಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿರುವದರಿAದ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಕಟ್ಟೆಚ್ಚರ ವಹಿಸಿದ್ದಾರೆ. ತಾ. ೨೬ರಂದು ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗುವದೆಂಬ ಸುಳಿವು ಕೂಡ ಲಭಿಸಿದೆ..!