ಮಡಿಕೇರಿ, ಆ. ೨೩: ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದಲ್ಲಿ ವಿಪಕ್ಷ ನಾಯಕರಿಗೆ ಸೂಕ್ತ ಭದ್ರತೆ ನೀಡುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಜೊತೆಗೆ ಸರಕಾರದ ಒತ್ತಡದಿಂದ ಈ ರೀತಿ ನಡೆದುಕೊಂಡಿದೆ ಎಂಬ ಅನುಮಾನವೂ ಮೂಡಿದ್ದು, ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಘಟನೆಯಿಂದ ಕೊಡಗಿನ ಮಾನ ಹರಾಜಾಗಿದೆ. ಕೊಡಗಿನ ಶಾಸಕರು ಸುಳ್ಳು ಹೇಳಿಕೆ ನೀಡುತ್ತ ಉರಿಯುವ ಬೆಂಕಿಗೆ ತುಪ್ಪ ಹಾಕುವ ಕೆಲಸ ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೊಟ್ಟೆ ಎಸೆತವನ್ನು ಖಂಡಿಸಿದ್ದಾರೆ. ಕೊಡಗಿನ ಶಾಸಕರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ಸಂಸದ ಪ್ರತಾಪ್ ಸಿಂಹ ಅವರಿಗೆ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಚುನಾವಣೆ ಸಮಯದಲ್ಲಿ ಕೇವಲ ಕೋಮು ಸಂಘರ್ಷ ಸೃಷ್ಟಿಸುವುದು ಅವರ ಮುಖ್ಯ ಉದ್ದೇಶವಾಗಿದೆ ಎಂದು ದೂರಿದರು.
ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಇದಕ್ಕೆ ನಾವುಗಳು ನ್ಯಾಯಾಂಗ ಮೂಲಕ ತಕ್ಕ ಉತ್ತರ ನೀಡಲಿದ್ದೇವೆ. ನಗರದ ಅಭಿವೃದ್ಧಿ ಮಾಡದ ನಗರಸಭಾ ಸದಸ್ಯರು ಕಾಂಗ್ರೆಸ್ ಹಾಗೂ ನನ್ನ ವಿರುದ್ಧ ಘೋಷಣೆ ಕೂಗಿದರು ಎಂದು ಹೇಳಿದರು.
ಗೋಷ್ಠಿಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕುಸುಮಾ ಜೋಯಪ್ಪ, ಪೊನ್ನಂಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾರತಿ, ಸೇವಾದಳ ಘಟಕದ ರಾಜ್ಯ ಕಾರ್ಯದರ್ಶಿ ತೆರೆಸಾ ವಿಕ್ಟರ್ ಇದ್ದರು.ತಲೆತಗ್ಗಿಸುವಂತಾಗಿದೆ : ಸರಿತಾ ಪೂಣಚ್ಚ
ಮಡಿಕೇರಿ: ಕಮಿಷನ್ ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿ ತನ್ನ ಆರೋಪಗಳನ್ನು ಮರೆಮಾಚಲು ಕೋಮುಭಾವನೆಯೊಂದಿಗೆ ಅಶಾಂತಿ ಸೃಷ್ಟಿಸಲು ಮುಂದಾಗಿದ್ದು ಜಿಲ್ಲೆಯಲ್ಲೂ ನಡೆದ ಕಾಮಗಾರಿಗಳ ಭ್ರಷ್ಟಾಚಾರವನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಯಲಿಗೆಳೆಯುತ್ತಾರೆ ಎಂಬ ಭಯದಿಂದ ಸಂತ್ರಸ್ತರನ್ನು ಭೇಟಿ ಮಾಡಲು ಹಾಗೂ ಕಾಮಗಾರಿಗಳನ್ನು ಪರಿಶೀಲಿಸಲು ಅಡ್ಡಿಪಡಿಸಿ ಸಿದ್ದರಾಮಯ್ಯ ಅವರ ಮೇಲೆ ದಾಳಿ ಮಾಡಲು ಯತ್ನಿಸಲಾಗಿದೆ ಎಂದು ಕೊಡಗು ಕಾಂಗ್ರೆಸ್ ವಕ್ತಾರೆ ಕೇಚಮಾಡ ಸರಿತಾ ಪೂಣಚ್ಚ ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಕೊಡಗು ಜಿಲ್ಲೆಗೆ ಅಪಾರ ಕೊಡುಗೆಯನ್ನು ನೀಡಿದ್ದು ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದಿದ್ದಾರೆ.
ಜಿಲ್ಲಾಧಿಕಾರಿಗಳ ಕಟ್ಟಡದ ತಡೆಗೋಡೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಲ್ಲಿ ಭ್ರಷ್ಟಾಚಾರ ನಡೆದಿದ್ದು ಇದನ್ನು ಮರೆಮಾಚಲು ಬಿಜೆಪಿ ಹಾಗೂ ಸಂಘ ಪರಿವಾರ ಕಾರ್ಯಕರ್ತರನ್ನು ಬಿಟ್ಟು ಸಿದ್ದರಾಮಯ್ಯ ಅವರ ಮೇಲೆ ದಾಳಿಗೆ ಯತ್ನಿಸಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಟೀಕಿಸಿದ್ದಾರೆ.
ಬಿಜೆಪಿಯ ದುರಾಡಳಿತದಿಂದ ಬೇಸತ್ತ ಪ್ರಜ್ಞಾವಂತರು ಕಾಂಗ್ರೆಸ್ ನತ್ತ ಒಲವು ತೋರುತ್ತಿದ್ದು ಇದನ್ನು ಸಹಿಸದ ಬಿಜೆಪಿ ಪ್ರಚೋದನಾತ್ಮಕವಾಗಿ ಗಲಭೆ ಸೃಷ್ಟಿಸಲು ಮುಂದಾಗುತ್ತಿದೆ ಎಂದು ಟೀಕಿಸಿದ್ದಾರೆ.ಮಂಥರ್ ಗೌಡ ವಿಶ್ಲೇಷಣೆ
ಮಡಿಕೇರಿ: ಜಿಲ್ಲಾ ಕಾಂಗ್ರೆಸ್ ಪ್ರಮುಖ ಮಂಥರ್ ಗೌಡ ಅವರು ‘ಶಕ್ತಿ’ಯೊಂದಿಗೆ ತಮ್ಮ ಈ ಕೆಳಗಿನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕರಿಗೆ ಅವರದೇ ಆದ ಸ್ಥಾನಮಾನವಿರುತ್ತದೆ. ಕೊಡಗು ಜಿಲ್ಲೆಗೆ ಬಂದಾಗ ಕೆಲವರು ವರ್ತಿಸಿದ ರೀತಿ ಅಸಮಂಜಸ. ಶಾಸಕ ಅಪ್ಪಚ್ಚು ರಂಜನ್ ಅವರು ಜವಾಬ್ದಾರಿಕೆ ಸ್ಥಾನದಲ್ಲಿದ್ದು ವಿಷಾದ ವ್ಯಕ್ತಪಡಿಸುವ ಬದಲು ಘಟನೆಯನ್ನು ಸಮರ್ಥಿಸಿಕೊಂಡಿರುವುದು ಸರಿಯಲ್ಲ.
ಅಲ್ಲದೆ, ಯಾರೇ ತಪ್ಪು ಮಾಡಿದ್ದರೂ ಅವರ ಕಾರ್ಯಕರ್ತರುಗಳಾಗಿರುವುದನ್ನು ಬಿ.ಜೆ.ಪಿ. ಒಪ್ಪಿಕೊಳ್ಳಬೇಕೇ ಹೊರತು, ಅಂತಹವರು ತಮ್ಮ ಕಾರ್ಯಕರ್ತರೇ ಅಲ್ಲ ಎಂದು ನುಣುಚಿಕೊಳ್ಳುವುದು ಸರಿಯಲ್ಲ. ಆ ಪಕ್ಷದ ಎಲ್ಲ ಕಾರ್ಯಕರ್ತರಿಗೂ ಇದು ಮುಜುಗರವುಂಟು ಮಾಡುತ್ತದೆ ಎಂದು ಮಂಥರ್ ಗೌಡ ವಿಶ್ಲೇಷಿಸಿದರು.ರಾಜಕೀಯ ಲಾಭಕ್ಕಾಗಿ ಗೊಂದಲ : ಜೆ.ಡಿ.ಎಸ್.
ಮಡಿಕೇರಿ: ರಾಷ್ಟಿçÃಯ ಪಕ್ಷಗಳು ತಮ್ಮ ರಾಜಕೀಯ ಬೆಳವಣಿಗೆಗೆ ಕೊಡಗಿನ ಹೆಸರಿಗೆ ಚ್ಯುತಿ ತರುತ್ತಿವೆ ಎಂದು ಜಿಲ್ಲಾ ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಆರೋಪಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೋಮು ಭಾವನೆ ಕೆರಳಿಸುವ ಕೆಲಸ ಇವೆರಡು ಪಕ್ಷಗಳಿಂದ ಆಗಿವೆ. ರಾಜಕೀಯವಾಗಿ ಲಾಭ ಪಡೆಯುವ ಸಲುವಾಗಿ ಅಶಾಂತಿ ಸೃಷ್ಟಿ ಮಾಡುತ್ತಿವೆ ಎಂದರು. ಪ್ರಾಕೃತಿಕ ವಿಕೋಪ, ಕೊರೊನಾ ಪರಿಸ್ಥಿತಿಯಿಂದ ಜನರು ಕಂಗೆಟ್ಟಿದ್ದಾರೆ. ಜನಜೀವನ ಹಾಳಾಗಿದೆ. ಇದನ್ನು ಸರಿಪಡಿಸಲು ಮುಂದಾಗಬೇಕಾದ ಸರಕಾರ ಕೋಮು ಸಂಘರ್ಷ ಸೃಷ್ಟಿ ಮಾಡಿದರೆ ವಿಪಕ್ಷ ಇದನ್ನು ಪ್ರಶ್ನೆ ಮಾಡುವಲ್ಲಿ ವಿಫಲಗೊಂಡಿದೆ ಎಂದರು.
ಯುವ ಘಟಕದ ಅಧ್ಯಕ್ಷ ವಿಶ್ವ ಮಾತನಾಡಿ, ಕೊಡಗಿನ ಶಾಸಕರ ಹೇಳಿಕೆಗಳು ಕೊಡಗಿನಲ್ಲಿ ಅಶಾಂತಿ ಸೃಷ್ಟಿಗೆ ಕಾರಣವಾಗಿದೆ. ಸಂಘ ಪರಿವಾರ ಅಭಿವೃದ್ಧಿ ಪರ ಹೋರಾಟ ನಡೆಸಲಿ ನಾವು ಕೈಜೋಡಿಸುತ್ತೇವೆ. ಕೋಮು ಸಂಘರ್ಷ ಸೃಷ್ಟಿಸಬೇಡಿ ಎಂದರು.
ಗೋಷ್ಠಿಯಲ್ಲಿ ವೀರಾಜಪೇಟೆ ತಾಲೂಕು ಅಧ್ಯಕ್ಷ ಟಿ.ಎ. ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಕೆ.ಕೆ. ಗಣೇಶ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಎಂ.ಕೆ. ವಿಶ್ವನಾಥ್ ಹಾಜರಿದ್ದರು.ರಾಜಕೀಯ ಲಾಭಕ್ಕಾಗಿ ಗೊಂದಲ : ಜೆ.ಡಿ.ಎಸ್.
ಮಡಿಕೇರಿ: ರಾಷ್ಟಿçÃಯ ಪಕ್ಷಗಳು ತಮ್ಮ ರಾಜಕೀಯ ಬೆಳವಣಿಗೆಗೆ ಕೊಡಗಿನ ಹೆಸರಿಗೆ ಚ್ಯುತಿ ತರುತ್ತಿವೆ ಎಂದು ಜಿಲ್ಲಾ ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಆರೋಪಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೋಮು ಭಾವನೆ ಕೆರಳಿಸುವ ಕೆಲಸ ಇವೆರಡು ಪಕ್ಷಗಳಿಂದ ಆಗಿವೆ. ರಾಜಕೀಯವಾಗಿ ಲಾಭ ಪಡೆಯುವ ಸಲುವಾಗಿ ಅಶಾಂತಿ ಸೃಷ್ಟಿ ಮಾಡುತ್ತಿವೆ ಎಂದರು. ಪ್ರಾಕೃತಿಕ ವಿಕೋಪ, ಕೊರೊನಾ ಪರಿಸ್ಥಿತಿಯಿಂದ ಜನರು ಕಂಗೆಟ್ಟಿದ್ದಾರೆ. ಜನಜೀವನ ಹಾಳಾಗಿದೆ. ಇದನ್ನು ಸರಿಪಡಿಸಲು ಮುಂದಾಗಬೇಕಾದ ಸರಕಾರ ಕೋಮು ಸಂಘರ್ಷ ಸೃಷ್ಟಿ ಮಾಡಿದರೆ ವಿಪಕ್ಷ ಇದನ್ನು ಪ್ರಶ್ನೆ ಮಾಡುವಲ್ಲಿ ವಿಫಲಗೊಂಡಿದೆ ಎಂದರು.
ಯುವ ಘಟಕದ ಅಧ್ಯಕ್ಷ ವಿಶ್ವ ಮಾತನಾಡಿ, ಕೊಡಗಿನ ಶಾಸಕರ ಹೇಳಿಕೆಗಳು ಕೊಡಗಿನಲ್ಲಿ ಅಶಾಂತಿ ಸೃಷ್ಟಿಗೆ ಕಾರಣವಾಗಿದೆ. ಸಂಘ ಪರಿವಾರ ಅಭಿವೃದ್ಧಿ ಪರ ಹೋರಾಟ ನಡೆಸಲಿ ನಾವು ಕೈಜೋಡಿಸುತ್ತೇವೆ. ಕೋಮು ಸಂಘರ್ಷ ಸೃಷ್ಟಿಸಬೇಡಿ ಎಂದರು.
ಗೋಷ್ಠಿಯಲ್ಲಿ ವೀರಾಜಪೇಟೆ ತಾಲೂಕು ಅಧ್ಯಕ್ಷ ಟಿ.ಎ. ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಕೆ.ಕೆ. ಗಣೇಶ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಎಂ.ಕೆ. ವಿಶ್ವನಾಥ್ ಹಾಜರಿದ್ದರು.ಟಿಪ್ಪು ಜಯಂತಿ ಮೂಲಕ ಅಶಾಂತಿ
ಗೋಣಿಕೊಪ್ಪಲು: ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಆಗಮಿಸಿದ ಸಂದರ್ಭ ಬಿಜೆಪಿ ಪಕ್ಷ ಇವರ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದೆ.
ಪ್ರತಿಭಟನೆಗೆ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರು ಭಾಗವಹಿಸಿದ್ದಾರೆ, ಆದರೆ ಮಾಜಿ ಸಿ.ಎಂ. ಸಿದ್ದರಾಮಯ್ಯ ಬಿಜೆಪಿ ಪಕ್ಷದವರು ಹಣವನ್ನು ಕೊಟ್ಟು ಜನರನ್ನು ಕರೆಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಬಿಜೆಪಿ ಪಕ್ಷದ ವೀರಾಜಪೇಟೆ ಮಂಡಲದ ವಕ್ತಾರ ಕುಟ್ಟಂಡ ಅಜಿತ್ ಕರುಂಬಯ್ಯ ಹಾಗೂ ಪುಲಿಯಂಡ ಪೊನ್ನಣ್ಣ ತೀವ್ರವಾಗಿ ಖಂಡಿಸಿದ್ದಾರೆ.
ಹಣವನ್ನು ಕೊಟ್ಟು ಪ್ರತಿಭಟನೆಗೆ ಜನರನ್ನು ಕರೆತರುವ ಪರಿಸ್ಥಿತಿ ಬಿಜೆಪಿ ಪಕ್ಷಕ್ಕಿಲ್ಲ, ಇದೇನಿದ್ದರೂ ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಎಂದು ಆರೋಪಿಸಿದ್ದಾರೆ. ಟಿಪ್ಪು ಜಯಂತಿ ಮೂಲಕ ಕೊಡಗಿನಲ್ಲಿ ಅಶಾಂತಿ ಸೃಷ್ಟಿಸಿದ್ದೇ ಸಿದ್ದರಾಮಯ್ಯನವರು ಎಂದು ಟೀಕಿಸಿದ್ದಾರೆ.ಪೊನ್ನಂಪೇಟೆ ಘಟಕದಿಂದ ಖಂಡನೆ
ಪೊನ್ನAಪೇಟೆ: ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಂದಲೇ ತೀವ್ರ ಖಂಡನೀಯ ಎಂದು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಹೇಳಿದ್ದಾರೆ.
ಗೋಣಿಕೊಪ್ಪಲಿನಲ್ಲಿ ನಡೆದ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರ ಪರವಾಗಿ ಮಾತನಾಡಿದ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಕೋಳೆರ ಭಾರತಿ ಅವರು ಮಾತನಾಡಿ, ವಿಪಕ್ಷ ನಾಯಕರ ಭೇಟಿ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಗೂಂಡಾಗಿರಿಯಿAದಾಗಿ ಜಿಲ್ಲೆಯಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದೆ. ಆಡಳಿತಾರೂಢ ಬಿಜೆಪಿ ಪಕ್ಷ ಜಿಲ್ಲೆಯಲ್ಲಿ ಸರ್ವಾಧಿಕಾರಿ ಧೋರಣೆ ಪ್ರದರ್ಶಿಸುತ್ತಿದ್ದು, ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗಿದೆ. ವಿಪಕ್ಷ ನಾಯಕರಿಗೇ ರಕ್ಷಣೆ ದೊರೆಯದಿದ್ದರೆ ಜಿಲ್ಲೆಯ ಸಾಮಾನ್ಯ ಜನರ ಪಾಡೇನು ಎಂದು ಅವರು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.
ಗೋಷ್ಠಿಯಲ್ಲಿ ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನಾಮೆರ ಅಂಕಿತ್ ಪೊನ್ನಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಆಲೀರ ಎಂ. ರಶೀದ್, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಮಣಿಕುಂಙ, ಕಾರ್ಮಿಕ ಘಟಕದ ಅಧ್ಯಕ್ಷೆ ಮಂಜುಳಾ ಉಪಸ್ಥಿತರಿದ್ದರು.‘ಪೊಲೀಸರನ್ನು ಅಸಹಾಯಕರಾಗಿಸಿದೆ’
ಮಡಿಕೇರಿ: ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಉಲ್ಲಂಘಿಸಿ ಬಿಜೆಪಿ ನಡೆಸಿರುವ ಪ್ರತಿಭಟನೆ ಖಂಡನೀಯವೆAದು ತಿಳಿಸಿರುವ ಜಾತ್ಯತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಆಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ವಿರೋಧ ಪಕ್ಷದ ನಾಯಕರಿಗೇ ರಕ್ಷಣೆ ಇಲ್ಲದಾಗಿದೆ ಎಂದು ಆರೋಪಿಸಿದ್ದಾರೆ.
ತಿತಿಮತಿಯಲ್ಲಿ ಪೊಲೀಸರ ಸಮ್ಮುಖದಲ್ಲೇ ಸಿದ್ದರಾಮಯ್ಯ ಅವರ ಕಾರಿನೊಳಗೆ ಸಾವರ್ಕರ್ ಫೋಟೋವನ್ನು ಪ್ರತಿಭಟನಾಕಾರರು ಹಾಕಿದ್ದಾರೆ. ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕರಿಗೇ ರಕ್ಷಣೆ ಇಲ್ಲದಾಗಿದೆ, ಇನ್ನು ಜನಸಾಮಾನ್ಯರ ಗತಿ ಏನು ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಸರ್ಕಾರ ಪೊಲೀಸರನ್ನು ಅಸಹಾಯಕರನ್ನಾಗಿ ಮಾಡಿದೆ ಎಂದು ಮನ್ಸೂರ್ ಆಲಿ ಆರೋಪಿಸಿದ್ದಾರೆ.