ಮಡಿಕೇರಿ, ಆ. ೨೩: ೨೦೨೧-೨೨ ನೇ ಸಾಲಿನ ಶೇ.೨೪.೧೦ ಯೋಜನೆಯಡಿ ನಗರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ವಿವಿಧ ಸೌಲಭ್ಯ ಕೋರಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಫಲಾನುಭವಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ಸೌಲಭ್ಯ ಪಡೆಯದೇ ಇರುವ ಬಗ್ಗೆ ದೃಢೀಕರಣ ಪತ್ರವನ್ನು ಹಾಗೂ ಅಗತ್ಯ ದಾಖಲಾತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ತಾ. ೩೦ ಕೊನೆಯ ದಿನಾಂಕವಾಗಿದೆ. ನಂತರ ಬಂದAತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ವಾರ್ಷಿಕ ವಿಶೇಷ ನೆರವು: ೧೦ನೇ ತರಗತಿ ಹಾಗೂ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ ಫಲಾನುಭವಿಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸೌಲಭ್ಯ ಪಡೆಯದೇ ಇರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಾರ್ಷಿಕ ವಿಶೇಷ ನೆರವಿನ ಮೊತ್ತ ನೀಡಲಾಗುವುದು. ಕುಟುಂಬದ ಜಾತಿ ಪ್ರಮಾಣ ಪತ್ರ, ಪ್ರಸಕ್ತ ಸಾಲಿನ ವಾರ್ಷಿಕ ಆದಾಯವು ರೂ.೨.೫೦ ಲಕ್ಷಕ್ಕಿಂತ ಕಡಿಮೆ ಇರುವ ಬಗ್ಗೆ ತಹಶೀಲ್ದಾರರಿಂದ ಆದಾಯ ದೃಢೀಕರಣ ಪತ್ರ ಹಾಗೂ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಪುಸ್ತಕ ಹಾಗೂ ವ್ಯಾಸಂಗ ದೃಢೀಕರಣ ಪತ್ರ ಲಗತ್ತಿಸಬೇಕು.

ಸಣ್ಣ ಉದ್ದಿಮೆದಾರರಿಗೆ ಸಹಾಯಧನ: ಬ್ಯಾಂಕ್‌ಗಳ ಸಾಲದ ನೆರವಿನಿಂದ ಸಣ್ಣ ಉದ್ದಿಮೆಯನ್ನು ಆರಂಭಿಸಲು ಇಚ್ಛಿಸುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸಾಲ ಮಂಜೂರಾತಿ ನಂತರ ಸಹಾಯಧನವನ್ನು ನೇರವಾಗಿ ಬ್ಯಾಂಕಿಗೆ ಪಾವತಿಸಲಾಗುವುದು. ಫಲಾನುಭವಿಯ ಜಾತಿ ಪ್ರಮಾಣ ಪತ್ರ, ಪ್ರಸಕ್ತ ಸಾಲಿನ ವಾರ್ಷಿಕ ಆದಾಯ ರೂ. ೩ ಲಕ್ಷ ಮೀರಿರದ ಆದಾಯ ಪ್ರಮಾಣ ಪತ್ರ ಹಾಗೂ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಪುಸ್ತಕ ಹಾಗೂ ಬ್ಯಾಂಕ್ ಸಾಲ ಮಂಜೂರಾತಿಯ ಪತ್ರ ಲಗತ್ತಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ಕಚೇರಿಯ ಯುಪಿಎ ಸೆಲ್‌ನಲ್ಲಿ ಪಡೆಯಬಹುದು ಎಂದು ನಗರಸಭೆ ಪೌರಾಯುಕ್ತ ವಿಜಯ ತಿಳಿಸಿದ್ದಾರೆ.