ಸೋಮವಾರಪೇಟೆ, ಆ. ೨೩: ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜು, ಯೂಥ್ ರೆಡ್‌ಕ್ರಾಸ್ ಘಟಕ ಹಾಗೂ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ೨೦೨೨-೨೩ನೇ ಸಾಲಿನ ಶೈಕ್ಷಣಿಕ ಸಾಲಿನ ಕೃಷಿ ವಿದ್ಯಾ ಕಾರ್ಯಕ್ರಮ ಸಮೀಪದ ಅರೆಯೂರು ಗ್ರಾಮದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಗಿರಿ ಮತ್ತು ಅವರ ಕುಟುಂಬಸ್ಥರು ವಿದ್ಯಾರ್ಥಿಗಳಿಗೆ ಭತ್ತದ ನಾಟಿ ಮಾಡುವ ಬಗ್ಗೆ ತರಬೇತಿ ನೀಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಸಂಚಾಲಕರಾದ ಫಾ. ಎಂ. ರಾಯಪ್ಪ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಬಿ.ಆರ್. ಹರೀಶ್, ಘಟಕದ ಕಾರ್ಯ ಕ್ರಮಾಧಿಕಾರಿಗಳಾದ ಆನಂದ್, ಚೈತ್ರ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.