ಸಿದ್ದಾಪುರ, ಆ. ೨೪: ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಜೋಡಣೆ ಕಾರ್ಯಕ್ಕೆ ಅಮ್ಮತ್ತಿ ಹೋಬಳಿ ನಾಡು ಕಚೇರಿಯಲ್ಲಿ ಕಂದಾಯ ಪರಿವೀಕ್ಷಕರಾದ ಅನಿಲ್ ಕುಮಾರ್ ಚಾಲನೆ ನೀಡಿದರು. ಸರ್ಕಾರದ ಆದೇಶದ ಮೇರೆಗೆ ವೋಟರ್ ಐ.ಡಿ.ಗೆ ಆಧಾರ್ ಜೋಡಣೆ ಮಾಡುವ ನಿಟ್ಟಿನಲ್ಲಿ ಅಮ್ಮತ್ತಿಯ ನಾಡು ಕಚೇರಿಯಲ್ಲಿ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೌಂಟರ್ ಒಂದನ್ನು ತೆರೆಯಲಾಗಿದೆ ಎಂದು ಅನಿಲ್ ಕುಮಾರ್ ತಿಳಿಸಿದ್ದಾರೆ.

ಮತದಾರರ ಗುರುತಿನ ಚೀಟಿಯನ್ನು ಹೊಂದಿರುವವರು ಆಧಾರ್ ಕಾರ್ಡ್ ಜೋಡಣೆಯನ್ನು ಮಾಡಲು ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಮ್ಮತ್ತಿ ಹೋಬಳಿ ವ್ಯಾಪ್ತಿಗೆ ಒಳಪಡುವ ಗ್ರಾಮ ಲೆಕ್ಕಿಗರು ಹಾಗೂ ಗ್ರಾಮ ಸಹಾಯಕರು ಹಾಜರಿದ್ದರು.