ಮಡಿಕೇರಿ, ಆ. ೨೪: ವೀರಾಜಪೇಟೆ ಶಾಸಕರಾದ ಕೆ.ಜಿ. ಬೋಪಯ್ಯ ಅವರು ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಇತ್ತೀಚೆಗೆ ಕೊಡಗಿನಲ್ಲಿ ನಡೆದ ಘಟನೆಗಳ ಬಗ್ಗೆ ವಿವರಣೆ ಹಾಗೂ ಮುಂದಿನ ಹೋರಾಟದ ಬಗ್ಗೆ ಈ ಸಂದರ್ಭ ಅವರು ಇಬ್ಬರು ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾಗಿ ತಿಳಿದು ಬಂದಿದೆ.

ಈ ಸಂದರ್ಭ ಜಲಸಂಪನ್ಮೂಲ ಖಾತೆ ಸಚಿವರಾದ ಗೋವಿಂದ ಕಾರಜೋಳ ಅವರು ಜತೆಗಿದ್ದರು. ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಕೆಜಿಬಿ ಚರ್ಚಿಸಿದರು. ಬಳಿಕ ಬಿಜೆಪಿ ಕಾರ್ಯಾಲಯಕ್ಕೂ ಭೇಟಿ ನೀಡಿದ

(ಮೊದಲ ಪುಟದಿಂದ) ಬೋಪಯ್ಯ ಅವರು, ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಜಿ.ವಿ. ರಾಜೇಶ್ ಮತ್ತು ರಾಜ್ಯ ಉಪಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರುಗಳನ್ನು ಭೇಟಿ ಮಾಡಿ ಪಕ್ಷದ ವಿಚಾರಗಳ ಕುರಿತು ಪರಾಮರ್ಶಿಸಿದರು.