ಮಡಿಕೇರಿ, ಆ. ೨೩: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. ೨೫ ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಬೇಕಿದ್ದ ಮಿನಿ ಉದ್ಯೋಗ ಮೇಳವನ್ನು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದರಿಂದ ಮುಂದೂಡಲಾಗಿದೆ.

ಈ ಉದ್ಯೋಗ ಮೇಳವು ತಾ. ೨೯ ರಂದು ಬೆಳಿಗ್ಗೆ ೧೦.೩೦ ಗಂಟೆಯಿAದ ೨ ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. ೦೮೨೭೨-೨೨೫೮೫೧ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ವಿಮಾ ಅವರು ತಿಳಿಸಿದ್ದಾರೆ.