ಮಡಿಕೇರಿ, ಅ. ೨೪ : ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಅಭಿಯಾನಕ್ಕೆ ಸಂಪೂರ್ಣ ಸಹಕಾರ ನೀಡುವುದಲ್ಲದೆ ಸರಕಾರಿ ಅಧಿಕಾರಿ ಗಳನ್ನು ಪರಿಷತ್ತಿನ ಸದಸ್ಯರನ್ನಾಗಿಸುವ ನಿಟ್ಟಿನಲ್ಲಿ ಸಹಕರಿಸುವುದಾಗಿ ಕೊಡಗು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಹೇಳಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕನ್ನಡ ನಾಡಿನ ನಾಡು ನುಡಿಯ ಸೇವೆಗೈಯುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡದಲ್ಲಿ ಸಮ್ಮೇಳನ ನಡೆಸಿದ ಸಂದರ್ಭದಲ್ಲಿ ತಾವು ಧಾರವಾಡದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಾಗಿದ್ದು ಸಮ್ಮೇಳನದ ಯಶಸ್ಸಿಗೆ ಸಂಪೂರ್ಣ ತೊಡಗಿಸಿಕೊಂಡಿದ್ದನ್ನು ನೆನಪಿಸಿಕೊಂಡರು. ಜಿಲ್ಲೆಯಲ್ಲಿ ಆರು ಲಕ್ಷದ ಸಮೀಪದ ಜನಸಂಖ್ಯೆ ಇದ್ದು ಒಂದು ಲಕ್ಷ ಸದಸ್ಯರನ್ನಾಗಿಸುವ ಗುರಿ ಹೊಂದುವAತೆ ಸೂಚಿಸಿ ಸರಕಾರಿ ಇಲಾಖೆಗಳ ಆಸಕ್ತ ಸಿಬ್ಬಂದಿಗಳನ್ನು ಸದಸ್ಯತ್ವ ತೆಗೆದುಕೊಳ್ಳಲು ಸೂಚಿಸುವುದಾಗಿ ನುಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಆಪ್ ಮೂಲಕ ಜಿಲ್ಲಾಧಿಕಾರಿಯವರನ್ನು ಕಸಾಪ ಸದಸ್ಯರನ್ನಾಗಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪರಿಷತ್ತಿನ ಸದಸ್ಯತ್ವ ಅಭಿಯಾನವನ್ನು ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಆಯೋಜಿಸಲಾಗುವುದು. ಮುಖ್ಯವಾಗಿ ಶಾಲಾ ಶಿಕ್ಷಕರನ್ನು ಸದಸ್ಯರನ್ನಾಗಿಸುವ ಮೂಲಕ ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ ಪರಂಪರೆಯ ಪರಿಚಯ ಮಾಡಲು ಪ್ರಯತ್ನಿಸಲಾಗುವುದು. ಎಲ್ಲ ಶಿಕ್ಷಕರ ಸಂಘಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಮುಖಾಂತರ ಸದಸ್ಯತ್ವ ಅಭಿಯಾನ ನಡೆಸಲಾಗುವುದು. ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಸಾಹಿತ್ಯ ಪರಿಷತ್ತಿನ ಮಹತ್ವದ ಕುರಿತು ತಿಳಿಯಪಡಿಸಿ ಅವರನ್ನು ಸದಸ್ಯರನ್ನಾಗಿ ಮಾಡಲಾಗುವುದು ಎಂದರು.

ವೇದಿಕೆಯಲ್ಲಿ ಕಸಾಪ ಜಿಲ್ಲಾ ಕಾರ್ಯದರ್ಶಿಗಳಾದ ಎಸ್.ಐ. ಮುನೀರ್ ಅಹಮದ್, ರೇವತಿ ರಮೇಶ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್.ಡಿ ವಿಜೇತ್, ಮಡಿಕೇರಿ ತಾಲೂಕು ಅಧ್ಯಕ್ಷ ಅಂಬೆಕಲ್ ನವೀನ್ ಇದ್ದರು.

ಕಾರ್ಯಕ್ರಮದಲ್ಲಿ ಸಾಹಿತಿಗಳಾದ ನಾಗೇಶ್ ಕಾಲೂರು, ಕಸ್ತೂರಿ ಗೋವಿಂದಮ್ಮಯ್ಯ, ಶೋಭಾ ಸುಬ್ಬಯ್ಯ, ಬೈತಡ್ಕ ಜಾನಕಿ, ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ, ಸೋಮವಾರಪೇಟೆ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಜೆ.ಸಿ. ಶೇಖರ್, ಸೋಮವಾರಪೇಟೆ ಕಸಬಾ ಹೋಬಳಿ ನಿಯೋಜಿತ ಅಧ್ಯಕ್ಷ ಕೀರ್ತಿ ಪ್ರಸಾದ್, ನಾಪೋಕ್ಲು ಹೋಬಳಿ ನಿಯೋಜಿತ ಅಧ್ಯಕ್ಷ ನೆರವಂಡ ಉಮೇಶ್, ಮಡಿಕೇರಿ ತಾಲೂಕು ಕಾರ್ಯದರ್ಶಿ ಕೆ.ಯು. ರಂಜಿತ್, ಸದಸ್ಯರಾದ ಸುನಿತಾ ಪ್ರೀತು, ದಿಶಾ, ವಾಸು ರೈ, ವಿ.ಟಿ. ಮಂಜುನಾಥ್, ಎಂ.ಎA. ಅಬ್ದುಲ್ಲಾ, ಜಿ.ಆರ್ ರಾಜು ಇದ್ದರು.