ಮಡಿಕೇರಿ, ಆ. ೨೪: ಜಿಲ್ಲೆಯಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರಕಾರ ಬದ್ಧವಾಗಿದೆ. ಯಾರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಆಗಮಿಸಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಕೇರಳಕ್ಕೆ ಹೊಂದಿಕೊAಡ ಜಿಲ್ಲೆ ಹಾಗೂ ಮತೀಯವಾಗಿ ಸೂಕ್ಷö್ಮ ಪ್ರದೇಶವಾಗಿರುವ ಕಾರಣ ಜಿಲ್ಲೆಯ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ರಾಜಕೀಯ ಪಕ್ಷಗಳ ಕಾರ್ಯಕ್ರಮ ಇದ್ದ ಹಿನ್ನೆಲೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸೆಕ್ಷನ್ ೧೪೪ ಜಾರಿ ಮಾಡಲಾಗಿದೆ. ಎಲ್ಲಾ ಗಡಿಗಳಲ್ಲಿಯೂ ಸೂಕ್ತ ಭದ್ರತೆ ವಹಿಸಿದ್ದು, ಕೇರಳ ಗಡಿಯಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಯಾವುದೇ ಸಮಸ್ಯೆ ಉಂಟಾಗದAತೆ ಸಮರ್ಥವಾಗಿ ಪೊಲೀಸ್ ಇಲಾಖೆ ಜವಾಬ್ದಾರಿ ನಿರ್ವಹಣೆ ಮಾಡಲಿದೆ ಎಂದು ಅಭಯ ನೀಡಿದರು.

ಪೊಲೀಸ್ ಇಲಾಖೆಯ ವೈಫಲ್ಯದಿಂದ ಘಟನೆ ನಡೆಯಿತಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅಲೋಕ್ ಕುಮಾರ್, ಆ ದೃಷ್ಟಿಕೋನದಲ್ಲಿ ತನಿಖೆ ನಡೆಯುತ್ತಿದೆ. ಇದಕ್ಕಾಗಿ ಚಾಮರಾಜನಗರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯನ್ನು ವಿಚಾರಣಾಧಿಕಾರಿಯಾಗಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಎಸ್.ಪಿ. ವರ್ಗಾವಣೆಯ ಪ್ರಸ್ತಾಪವಿಲ್ಲ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಅವರ ವರ್ಗಾವಣೆಯ ಪ್ರಸ್ತಾಪವಿಲ್ಲ ಎಂದು ಇದೇ ಸಂದರ್ಭ ಅವರು ಸ್ಪಷ್ಟಪಡಿಸಿದರು.

(ಮೊದಲ ಪುಟದಿಂದ)

ಅಧಿಕಾರಿಗಳೊAದಿಗೆ ಸಭೆ : ಪೊಲೀಸ್ ವರಿಷ್ಠಾಧಿಕಾರಿಯ ಕಚೇರಿಯಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ ಸಭೆ ನಡೆಸಿ ಜಿಲ್ಲೆಯಲ್ಲಿ ಕೈಗೊಂಡ ಕ್ರಮದ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಅವರೊಂದಿಗೆ ಸಮಗ್ರ ಮಾಹಿತಿ ಪಡೆದರು.

ಈ ಸಂದರ್ಭ ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಮಧುಕರ್ ಪವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲಚೀರ ಎಂ. ಅಯ್ಯಪ್ಪ, ಡಿವೈಎಸ್ ಪಿ ಗಜೇಂದ್ರ ಪ್ರಸಾದ್ ಸೇರಿದಂತೆ ಇನ್ನಿತರರು ಹಾಜರಿದ್ದರು. ಇನ್ನೂ ೩ ದಿನಗಳ ಕಾಲ ಉನ್ನತ ಅಧಿಕಾರಿಗಳು ಜಿಲ್ಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.