ನಾಪೋಕ್ಲು, ಆ. ೨೫: ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಚೋನಕೆರೆಯಲ್ಲಿ ಪತ್ತೆಯಾದ ಗೋಮಾಂಸ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣಕ್ಕೆ ಸಂಬAಧಿಸಿದAತೆ ತಾ. ೮ ರಂದು ಇಬ್ಬರನ್ನು ಬಂಧಿಸಲಾಗಿತ್ತು. ಪ್ರಮುಖ ಆರೋಪಿ ಎನ್ನಲಾದ ಅಸ್ಸಾಂ ಮೂಲದ ಕಾರ್ಮಿಕ ಜಾಮಿಯಾ ಆಲಿ (೨೭) ಎಂಬಾತ ತಲೆ ಮರೆಸಿಕೊಂಡಿದ್ದ. ಈತನ ಪತ್ತೆಗೆ ಕ್ರಮಕೈಗೊಂಡಿದ್ದ ಪೊಲೀಸರು ತಾ. ೨೪ ಸಂಜೆ ೭ ಗಂಟೆಗೆ ಚೋನಕೆÀರೆ ಬಸ್ ತಂಗುದಾಣದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಡಿವೈಎಸ್‌ಪಿ ಗಜೇಂದ್ರ ಪ್ರಸಾದ್ ಆದೇಶದಂತೆ ಮಡಿಕೇರಿ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಮಾರ್ಗದರ್ಶನದಲ್ಲಿ ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಸದಾಶಿವ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಪೊಲೀಸ್ ಠಾಣಾ ಹೆಡ್‌ಕಾನ್ಸ್ಟೇಬಲ್‌ಗಳಾದ ರವಿಕುಮಾರ್, ಸಾಜಾನ್, ಶರತ್, ಲವ, ಮತ್ತಿತರರು ಪಾಲ್ಗೊಂಡಿದ್ದಾರೆ.