ಸೋಮವಾರಪೇಟೆ, ಆ.೨೫: ತಾಲೂಕಿನ ಆಲೂರು ಸಿದ್ದಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯೆ ಡಾ.ಸುಪರ್ಣಾ ಕೃಷ್ಣಾನಂದ ಅವರು ರಾಜ್ಯ ಸರ್ಕಾರದ ಶ್ರೇಷ್ಠ ವೈದ್ಯೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವೈದ್ಯರ ದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ವಿಶೇಷ ಸಾಧನೆ ತೋರಿದ ವೈದ್ಯರುಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಡಾ.ಸುಪರ್ಣಾ ಕೃಷ್ಣಾನಂದ ಅವರು ಆಲೂರುಸಿದ್ದಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಗಮನಾರ್ಹ ಸೇವೆ ಸಲ್ಲಿಸಿದ್ದು, ಸರ್ಕಾರಿ ಆಸ್ಪತ್ರೆಯನ್ನು ಯಾವುದೇ ಖಾಸಗಿ ಆಸ್ಪತ್ರೆಗೂ ಕಡಿಮೆ ಇಲ್ಲದಂತೆ ನಿರ್ವಹಿಸುವುದರೊಂದಿಗೆ ರೋಗಿಗಳೊಡನೆ ಉತ್ತಮ ಬಾಂಧವ್ಯ ಇರಿಸಿಕೊಂಡು ಉತ್ತಮ ಸೇವೆ ನೀಡುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಸರ್ಕಾರದಿಂದ ಪ್ರಶಸ್ತಿ ನೀಡಲಾಗಿದೆ.

ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.