ಮಡಿಕೇರಿ, ಆ. ೨೪: ಕಾಕೋಟುಪರಂಬು ಸಮೀಪ ಧರ್ಮಗುರು ಹಾರಿಸ್ ಮುಸ್ಲಿಯಾರ್ ಎಂಬುವವರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸುನ್ನಿ ಯುವಜನ ಸಂಘ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದೆ. ಈ ಬಗ್ಗೆ ಸೂಕ್ತ ತನಿಖೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಎಸ್‌ವೈಎಸ್ ಜಿಲ್ಲಾಧ್ಯಕ್ಷ ಬಶೀರ್ ಹಾಜಿ, ಉಪಾಧ್ಯಕ್ಷರುಗಳಾದ ಕೆ.ಎ. ಯಾಕುಬ್ ಬಜೆಗುಂಡಿ, ಎಂ.ಎA. ರಫೀಕ್ ಸುಂಟಿಕೊಪ್ಪ, ಪ್ರಧಾನ ಕಾರ್ಯದರ್ಶಿ ಎಂ.ವೈ, ಅಶ್ರಫ್ ಫೈಝಿ, ಸಂಘಟನಾ ಕಾರ್ಯದರ್ಶಿ ಕೆ.ಎ. ಅಬೂಬಕರ್ ದಾರಿಮಿ, ಎಸ್.ಎಂ. ಮುಹಮ್ಮದ್ ಹಾಗೂ ಜಿಲ್ಲಾ ಕೋಶಾಧಿಕಾರಿ ವೈ.ಎಂ. ಉಮ್ಮರ್ ಫೈಝಿ ದೂರು ನೀಡುವ ಸಂದರ್ಭ ಹಾಜರಿದ್ದರು.