ಮಡಿಕೇರಿ, ಆ.೨೪ : ಎನ್‌ಇಇಟಿ ಮತ್ತು ಸಿಇಟಿ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳು ಸಮಯ ಪಾಲನೆಗೆ ಆದ್ಯತೆ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಕಿವಿಮಾತು ಹೇಳಿದ್ದಾರೆ.

ಕೃಷಿಕ್ ಸರ್ವೋದಯ ಫೌಂಡೇಶನ್‌ನ ಮಡಿಕೇರಿ ಶಾಖೆ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ನಡೆದ ಎನ್‌ಇಇಟಿ ಮತ್ತು ಸಿಇಟಿ ಪರೀಕ್ಷೆಗೆ ಬಡ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಎನ್‌ಇಇಟಿ ಮತ್ತು ಸಿಇಟಿ ಪರೀಕ್ಷೆಗಳ ಮೂಲಕ ಉತ್ತಮ ಗುರಿ ಸಾಧಿಸಲು ಮುಂದಾಗುವ ವಿದ್ಯಾರ್ಥಿಗಳು ಶ್ರದ್ಧೆ, ಶಿಸ್ತು ಮತ್ತು ಸಮಯ ಪಾಲನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದರು.

ಸತತ ಪರಿಶ್ರಮದಿಂದ ಶೈಕ್ಷಣಿಕ ಗುರಿ ಸಾಧಿಸಲು ಸಾಧ್ಯವಿದೆ, ಪರೀಕ್ಷೆಗಳನ್ನು ಆತ್ಮಸ್ಥೆöÊರ್ಯದಿಂದ ಎದುರಿಸಬೇಕು. ಉನ್ನತ ಹುದ್ದೆಯ ಕನಸಿನೊಂದಿಗೆ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ತಾವೂ ಕೂಡ ಐಪಿಎಸ್‌ಗಾಗಿ ಕೃಷಿಕ್ ಸರ್ವೋದಯ ಫೌಂಡೇಶನ್ ನ ಬೆಂಗಳೂರು ಶಾಖೆ ಮೂಲಕ ತರಬೇತಿ ಪಡೆದಿದ್ದು, ಹೆಚ್ಚು ಸಹಕಾರಿಯಾಗಿದೆ ಎಂದು ಎಸ್‌ಪಿ ಅಯ್ಯಪ್ಪ ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸರ್ಕಾರಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಪುಟ್ಟರಾಜು; ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎನ್‌ಇಇಟಿ ಮತ್ತು ಸಿಇಟಿ ತರಬೇತಿ ವಿದ್ಯಾರ್ಥಿಗಳಿಗೆ ವರದಾನವಾಗಿದ್ದು, ಎಲ್ಲರೂ ಸದುಪಯೋಗಪಡಿಸಿ ಕೊಳ್ಳಬೇಕು ಎಂದರು.

ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪಿ.ಆರ್.ವಿಜಯ ಮಾತನಾಡಿ ಉಚಿತ ತರಬೇತಿಯಿಂದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ತರಗತಿ ನಡೆಸಲು ಕೊಠಡಿ ನೀಡುವುದಾಗಿ ಹೇಳಿದರು. ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಮಾತನಾಡಿ ತರಬೇತಿಗೆ ಬೇಕಾದ ಅಗತ್ಯ ಸಹಕಾರವನ್ನು ನೀಡಲಾಗುವುದು ಎಂದರು.

ಕೃಷಿಕ್ ಸರ್ವೋದಯ ಫೌಂಡೇಶನ್‌ನ ಉಪಾಧ್ಯಕ್ಷ ಡಾ.ದಯಾನಂದ, ನಿರ್ದೇಶಕರುಗಳಾದ ತೆಕ್ಕಡೆ ಗುಲಾಬಿ ಜನಾರ್ಧನ, ಡಾ.ಕೋರನ ಸರಸ್ವತಿ, ಕುಂದಲ್ಪಾಡಿ ದಿವಾಕರ ಹಾಗೂ ನಂಗಾರು ರಾಮಚಂದ್ರ, ಪಾಣತ್ತಲೆ ಪಳಂಗಪ್ಪ ಅವರುಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕುರಿತು ಮಾಹಿತಿ ನೀಡಿದರು.

ಕೊಡಗು ಜಿಲ್ಲೆಯ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ. ಈಗಾಗಲೇ ಎನ್‌ಇಇಟಿ ಮತ್ತು ಸಿಇಟಿ ತರಬೇತಿ ಆರಂಭಗೊAಡಿದ್ದು, ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ನುರಿತ ಉಪನ್ಯಾಸಕರನ್ನು ನೇಮಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ೯೪೪೮೦೦೫೬೪೨ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಫೌಂಡೇಶನ್‌ನ ಖಜಾಂಚಿ ನವೀನ್ ಅಂಬೆಕಲ್ಲು ತಿಳಿಸಿದರು.

ಫೌಂಡೇಶನ್‌ನ ಅಧ್ಯಕ್ಷ ನಂಗಾರು ನಿಂಗರಾಜು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ಕೊಡಗು ದಕ್ಷಿಣ ಕನ್ನಡ ಗೌಡ ಸಮಾಜದ ಖಜಾಂಚಿ ಕುಂಭಗೌಡನ ಸೋಮಣ್ಣ, ಫೌಂಡೇಶನ್‌ನ ನಿರ್ದೇಶಕ ಕುಟ್ಟನ ಸಂದೀಪ್, ಉಪನ್ಯಾಸಕ ಚಿದಾನಂದ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ೮೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಕುಂಭಗೌಡನ ರಂಜಿತ್ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ಎಸ್‌ಪಿ ಎಂ.ಎ.ಅಯ್ಯಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.