ಸಾಕ್ಷಿ-ದಾಖಲೆ ಕೊಡಬೇಕು:ಇಲ್ಲದಿದ್ದರೆ ವಿರುದ್ಧ ಮಾನನಷ್ಟ ಮೊಕದ್ದಮೆ-ಸಚಿವ ಮುನಿರತ್ನ

ಬೆಂಗಳೂರು, ಆ. ೨೪: ತಮ್ಮ ವಿರುದ್ಧ ೪೦% ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಗರಂ ಆಗಿದ್ದಾರೆ. ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿರುವ ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ, ಕೆಂಪಣ್ಣ ಏನೇ ಆರೋಪ ಮಾಡಬಹುದು, ಅದಕ್ಕೆ ಸಾಕ್ಷಿ ಇದೆಯೇ, ಇದ್ದರೆ ದಾಖಲೆ ಕೊಡಬೇಕು. ಇಲ್ಲದಿದ್ದರೆ ನಾನು ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸಚಿವ ವಿ.ಮುನಿರತ್ನ ವಿರುದ್ಧ ಕೆಂಪಣ್ಣ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಆರೋಪಕ್ಕೆ ಸಂಬAಧಿಸಿದAತೆ ಒಂದು ಸಣ್ಣ ಸಾಕ್ಷಿ ಕೊಡಲಿ. ನನ್ನ ಬಳಿ ಯಾರು ಬಂದಿದ್ದಾರೆ, ನಾನು ಏನು ಹೇಳಿದ್ದೇನೆ. ಎಲ್ಲವನ್ನೂ ನಾನೇ ತನಿಖೆ ಮಾಡಿಸುತ್ತೇನೆ, ಇದನ್ನ ಬಿಡಲ್ಲ. ಸರ್ಕಾರ, ಸಚಿವರ ಬಗ್ಗೆ ಆರೋಪ ಮಾಡಿದರೆ ಸುಮ್ಮನಿರಲ್ಲ. ನನ್ನ ತಪ್ಪಿದ್ದರೆ ಏನು ಶಿಕ್ಷೆ ಕೊಟ್ಟರೂ ನಾನು ಅನುಭವಿಸುತ್ತೇನೆ ಎಂದು ಸಚಿವ ಮುನಿರತ್ನ ಗುಡುಗಿದ್ದಾರೆ.

ಸಿಎಂ, ಸಚಿವರು, ಶಾಸಕರಿಂದ ೪೦% ಕಮಿಷನ್‌ಗೆ ಬೇಡಿಕೆ-ಕೆಂಪಣ್ಣ

ಬೆAಗಳೂರು, ಆ. ೨೪: ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಮತ್ತೊಮ್ಮೆ ೪೦% ಕಮಿಷನ್ ಆರೋಪ ಗುತ್ತಿಗೆದಾರರಿಂದ ಕೇಳಿಬರುತ್ತಿದೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸರ್ಕಾರದ ಸಂಪೂರ್ಣ ವ್ಯವಸ್ಥೆಯೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯಿಂದ ಹಿಡಿದು ಸಚಿವರುಗಳು, ಶಾಸಕರು ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಪ್ರಧಾನಿ ಮೋದಿಗೆ ಪತ್ರ ಬರೆಯುವುದಾಗಿ ಕೆಂಪಣ್ಣ ಗುಡುಗಿದ್ದಾರೆ. ಕೋಲಾರ ಜಿಲ್ಲೆ ಉಸ್ತುವಾರಿ ಸಚಿವ ಮುನಿರತ್ನ ಅವರ ಹೆಸರನ್ನು ಮಾಧ್ಯಮಗಳ ಮುಂದೆ ಪ್ರಸ್ತಾಪಿಸಿರುವ ಅವರು, ಗುತ್ತಿಗೆದಾರರ ಕೆಲಸ ಮಂಜೂರು ಆಗ ಬೇಕೆಂದರೆ ಲಂಚ ಕೊಡಬೇಕು, ಇಲ್ಲದಿದ್ದರೆ ಗುತ್ತಿಗೆ ರದ್ದು ಮಾಡಲಾ ಗುವುದು, ಹಣ ಕಲೆಕ್ಟ್ ಮಾಡಿ ತನ್ನಿ ಎಂದು ತೋಟಗಾರಿಕೆ ಸಚಿವ ಮುನಿರತ್ನ ನೇರವಾಗಿ ಬೆದರಿಕೆ ಹಾಕುತ್ತಾರೆ ಎಂದು ಕೆಂಪಣ್ಣ ದೂರಿದ್ದಾರೆ. ಸರ್ಕಾರದ ಸಚಿವರು, ಶಾಸಕರು ಲಂಚ, ಭ್ರಷ್ಟಾಚಾರದಲ್ಲಿ ನಂಬರ್ ೧, ೨ ಸ್ಥಾನದಲ್ಲಿದ್ದಾರೆ. ಗುತ್ತಿಗೆದಾರರಿಂದ ಕಾಮಗಾರಿ ಹಣದಲ್ಲಿ ಶೇಕಡಾ ೪೦ರಷ್ಟು ಲಂಚ ಪಡೆಯುತ್ತಾರೆ. ಅವರಿಗೆ ಇಷ್ಟೊಂದು ಲಂಚ ಹೋದರೆ ಉಳಿದ ಹಣದಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಲು ಹೇಗೆ ಸಾಧ್ಯ, ಗುತ್ತಿಗೆದಾರರು ಜನಪ್ರತಿನಿಧಿಗಳ ಕಿರುಕುಳದಿಂದ ನಲುಗಿ ಹೋಗುತ್ತಿದ್ದಾರೆ ಎಂದು ಕೆಂಪಣ್ಣ ಆರೋಪಿಸಿದ್ದಾರೆ. ಒಂದು ವರ್ಷ ೨ ತಿಂಗಳಿAದ ಹೋರಾಟ ಮಾಡುತ್ತಿದ್ದೇವೆ. ಸಿಎಂ ಮಾತಿಗೂ ಬೆಲೆ ಇಲ್ಲದಂತಾಗಿದೆ. ಮಾನ, ಮರ್ಯಾದೆ ಇಲ್ಲದ ಜನಪ್ರತಿನಿಧಿಗಳು ಇವರು. ಇನ್ನೂ ೨೨ ಸಾವಿರ ಕೋಟಿ ಬಿಲ್ ಪೆಂಡಿAಗ್ ಇದೆ. ಕೆಲವರದು ೩ ವರ್ಷಗಳಿಂದ ಬಾಕಿ ಇದೆ. ನನ್ನ ಜೀವನದಲ್ಲಿ ನೋಡಿದ ಅತ್ಯಂತ ಭ್ರಷ್ಟ ಸರ್ಕಾರ ಇದಾಗಿದೆ. ಇದರಲ್ಲಿ ಬೊಮ್ಮಾಯಿ ಸೇರಿದಂತೆ ಎಲ್ಲರೂ ಇದ್ದಾರೆ. ಯಾರಿಗೂ ರ‍್ಯಾಂಕಿAಗ್ ಕೊಡೋಕೆ ಆಗಲ್ಲ ಎಂದು ಆರೋಪಿಸಿದರು.

ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್

ಪಾಟ್ನಾ, ಆ. ೨೪: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬುಧವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಿದ್ದು, ಮಹಾಘಟಬಂಧನ್ ಮೈತ್ರಿಕೂಟ ಸರ್ಕಾರ ಭದ್ರವಾಗಿದೆ. ಇಂದು ನಡೆದ ವಿಶೇಷ ಅಧಿವೇಶನದಲ್ಲಿ ನಿತೀಶ್ ಕುಮಾರ್ ಅವರು ತಮ್ಮ ನೇತೃತ್ವದ ಮಹಾಘಟಬಂಧನ ಸರ್ಕಾರದ ಬಹುಮತ ಸಾಬೀತಪಡಿಸಿದರು. ಬಳಿಕ ಮಾತನಾಡಿದ ಜನತಾ ದಳ(ಯುನೈಟೆಡ್) ಮುಖ್ಯಸ್ಥ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಅವರು, ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ಬಿಜೆಪಿ ಶಾಸಕರು ಸದನದಿಂದ ಹೊರ ನಡೆದರು. ನಿತೀಶ್ ಕುಮಾರ್ ಸಾರಥ್ಯದ ಮಹಾಘಟಬಂಧನ್ ಸರ್ಕಾರದ ವಿಶ್ವಾಸಮತ ಯಾಚನೆಗೂ ಮುನ್ನ ಬಿಹಾರ ವಿಧಾನಸಭೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ವಿಜಯ್ ಕುಮಾರ್ ಸಿನ್ಹಾ ರಾಜೀನಾಮೆ ನೀಡಿದ್ದರು.

ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ

ಪಾಟ್ನಾ, ಆ. ೨೪: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಭಾನುವಾರ ಕಲ್ಲು ತೂರಾಟ ನಡೆದಿದೆ. ಪಾಟ್ನಾದಲ್ಲಿ ನಡೆದ ಈ ಘಟನೆ ವೇಳೆ ಬೆಂಗಾವಲು ವಾಹನ ಪಡೆಯಲ್ಲಿ ನಿತೀಶ್ ಕುಮಾರ್ ಇರಲಿಲ್ಲ ಎಂದು ತಿಳಿದುಬಂದಿದೆ. ದಾಳಿಯಲ್ಲಿ ಬೆಂಗಾವಲು ವಾಹನದ ಕಾರಿನ ಗಾಜುಗಳಿಗೆ ಹಾನಿಯಾಗಿದೆ.

ಶಿವಮೊಗ್ಗ: ನಕಲಿ ಪತ್ರ ಬರೆದ ಭೂಪ!

ಶಿವಮೊಗ್ಗ, ಆ. ೨೪: ವಿಲಕ್ಷಣ ಘಟನೆಯೊಂದರಲ್ಲಿ ವಿವಾಹಿತ ಮಹಿಳೆ ಯೊಂದಿಗೆ ಅಕ್ರಮ ಸಂಬAಧ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯ ಪತಿಯನ್ನು ಕೋಮುಗಲಭೆಗೆ ಸಂಚು ಪ್ರಕರಣದಲ್ಲಿ ಸಿಲುಕಿಸಿ, ಆಕೆಯ ಪತಿ ಜೈಲು ಪಾಲಾದ ನಂತರ ಆಕೆಯೊಂದಿಗೆ ವಾಸಿಸಲು ಯತ್ನಿಸಿ ಪೊಲೀಸರ ಅತಿಥಿ ಯಾಗಿದ್ದಾನೆ. ಇತ್ತೀಚೆಗೆ ಕೋಮುಗಲಭೆಗೆ ಸಾಕ್ಷಿಯಾಗಿರುವ ಶಿವಮೊಗ್ಗ ನಗರದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಮೂರು ಕೊಲೆಗಳು ಮತ್ತು ಕೋಮು ಘರ್ಷಣೆಗಳ ಬಗ್ಗೆ ಅನಾಮಧೇಯ ಪತ್ರದ ಮೂಲಕ ಎಚ್ಚರಿಕೆ ನೀಡಲಾಗಿತ್ತು. ಪತ್ರದ ಜಾಡು ಹಿಡಿದ ಪೊಲೀಸರು ನಕಲಿ ಪತ್ರ ಬರೆದ ಅಯೂಬ್ ಎಂಬಾತನನ್ನು ಬಂಧಿಸಿದ್ದಾರೆ. ಮೊಹಮ್ಮದ್ ಫೈಜಲ್ ಎಂಬಾತನ ಪತ್ನಿಯೊಂದಿಗೆ ಅಕ್ರಮ ಸಂಬAಧ ಹೊಂದಿದ್ದ ಅಯೂಬ್ ನಕಲಿ ಪತ್ರ ಬರೆದಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆಗಸ್ಟ್ ೨೦ ರಂದು ರಾತ್ರಿ ೮ ಗಂಟೆ ಸುಮಾರಿಗೆ ಗಾಂಧಿ ಬಜಾರ್‌ನ ಶ್ರೀ ಗಂಗಾ ಪರಮೇಶ್ವರಿ ದೇವಸ್ಥಾನದಲ್ಲಿ ಇರಿಸಲಾಗಿದ್ದ ಪತ್ರವನ್ನು ಅಂಗಡಿ ಮಾಲೀಕರೊಬ್ಬರು ಪತ್ತೆ ಮಾಡಿದ್ದಾರೆ. ಗಣೇಶ ಹಬ್ಬವನ್ನು ಹಾಳು ಮಾಡಲು ಮೂವರು ವ್ಯಕ್ತಿಗಳು ಸಂಚು ರೂಪಿಸಿದ್ದು, ಮೂವರನ್ನು ಹತ್ಯೆ ಮಾಡುವ ಸಂಚು ರೂಪಿಸಲಾಗಿದೆ ಎಂದು ಅನಾಮಧೇಯ ವ್ಯಕ್ತಿ ಪತ್ರದಲ್ಲಿ ಉಲ್ಲೇಖಿಸಿದ್ದ. ಅವರು ತಮ್ಮ ಗುರಿ ಸಾಧಿಸಲು ಮಂಗಳೂರಿನಿAದ ಜನರನ್ನು ಕರೆತರಲು ಯೋಜಿಸುತ್ತಿದ್ದು, ಈ ಮೂವರಲ್ಲಿ ಮೊಹಮ್ಮದ್ ಫೈಝಲ್ ಒಬ್ಬರು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇತ್ತೀಚೆಗಷ್ಟೇ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಸ್ನೇಹಿತ, ಮಾರ್ವಾರ್ಡಿ ಬಟ್ಟೆ ಅಂಗಡಿ ಮಾಲೀಕ ಹಾಗೂ ಓರ್ವ ಯುವಕನನ್ನು ಹತ್ಯೆ ಮಾಡಲು ಮೂವರು ಯೋಜನೆ ರೂಪಿಸಿದ್ದರು. ಫೈಝಲ್ ಗಾಂಜಾ ಸೇವಿಸಿ ಮಾರಾಟ ಮಾಡುತ್ತಿದ್ದು, ರೌಡಿಸಂನಲ್ಲಿ ತೊಡಗಿದ್ದಾನೆ ಎಂದು ಆಯೂಬ್ ಪತ್ರದಲ್ಲಿ ತಿಳಿಸಿದ್ದನು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ತನಿಖೆಯ ಸಂದರ್ಭದಲ್ಲಿ, ಅಯೂಬ್ ನಕಲಿ ಪತ್ರ ಬರೆದಿರುವುದು ಮತ್ತು ಪತ್ರದಲ್ಲಿನ ಆತನ ಆರೋಪಗಳು ಸುಳ್ಳು ಎಂದು ಪೊಲೀಸರು ಕಂಡುಕೊAಡಿದ್ದಾರೆ. ವದಂತಿಗಳನ್ನು ಹರಡಿದ್ದಕ್ಕಾಗಿ ಆರೋಪಿ ಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ ಎಂ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ. ಆರೋಪಿ ಅಯೂಬ್ ಫೈಝಲ್ ಪತ್ನಿಯೊಂದಿಗೆ ಅಕ್ರಮ ಸಂಬAಧ ಹೊಂದಿದ್ದ. ಫೈಝಲ್‌ನನ್ನು ಪೊಲೀಸರು ಬಂಧಿಸಬೇಕು ಎಂಬುದು ಆತನ ಯೋಚನೆಯಾಗಿತ್ತು ಎಂದು ಎಸ್‌ಪಿ ಹೇಳಿದ್ದಾರೆ.

ರೂ. ೨ ಲಕ್ಷ ಪರಿಹಾರ ನೀಡಲು ಬ್ಯಾಂಕ್‌ಗೆ ಸೂಚನೆ

ಬೆಂಗಳೂರು, ಆ. ೨೪: ಗ್ರಾಹಕರೊಬ್ಬರು ಕ್ರೆಡಿಟ್ ಕಾರ್ಡ್ನ ಬಾಕಿ ಮೊತ್ತವನ್ನು ಸೂಕ್ತ ಸಮಯದಲ್ಲಿ ಪಾವತಿ ಮಾಡಿದ್ದರೂ, ಕರೆ/ ಮೆಸೇಜ್ ಮಾಡಿ ಹಣ ಪಾವತಿಸುವಂತೆ ಚಿತ್ರ ಹಿಂಸೆ ನೀಡುತ್ತಿದ್ದ ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಸಂತ್ರಸ್ತ ವ್ಯಕ್ತಿಗೆ ೨ ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಗ್ರಾಹಕ ಆಯೋಗ ನಿರ್ದೇಶನ ನೀಡಿದೆ. ಮದ್ರಾಸ್‌ನ ಲಾಯರ್ ಲೋಕನಾಥನ್ ಜಯಕುಮಾರ್‌ಗೆ ಬ್ಯಾಂಕ್ ಬರೊಬ್ಬರಿ ೫೮ ಬಾರಿ ಕರೆ/ ಮೆಸೇಜ್‌ಗಳನ್ನು ಮಾಡಿ ಚಿತ್ರಹಿಂಸೆ ನೀಡಿತ್ತು. ಗ್ರಾಹಕರು ಸೂಕ್ತ ಸಮಯದಲ್ಲಿ ಹಣ ಪಾವತಿಸಿದ್ದರೂ ಬ್ಯಾಂಕ್‌ನ ಲೋಪದೋಷಗಳು ಸ್ಪಷ್ಟವಾಗಿದ್ದರಿಂದ ಬೆಂಗಳೂರು ನಗರ ಎರಡನೇ ಹೆಚ್ಚುವರಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಸಂತ್ರಸ್ತ ವ್ಯಕ್ತಿಗೆ ೨ ಲಕ್ಷ ರೂಪಾಯಿ ಮೊತ್ತಕ್ಕೆ ಪ್ರತಿ ವರ್ಷಕ್ಕೆ ಶೇ. ೮ ರಷ್ಟು ಬಡ್ಡಿ ಸೇರಿಸಿ ಪರಿಹಾರವನ್ನು ನೀಡಬೇಕು ಜೊತೆಗೆ ದಾವೆ ವೆಚ್ಚಗಳಿಗಾಗಿ ಹೆಚ್ಚುವರಿ ೧೦,೦೦೦ ರೂಪಾಯಿ ನೀಡಬೇಕು ಎಂದು ಆಯೋಗ ಸೂಚಿಸಿದೆ. ೭೫ ವರ್ಷದ ವಕೀಲ ಲೋಕನಾಥನ್ ಜಯಕುಮಾರ್, ಕೋರಮಂಗಲ ನಿವಾಸಿಯಾಗಿದ್ದಾರೆ.