ಮಡಿಕೇರಿ, ಆ. ೨೫: ಪ್ರಸಕ್ತ ಸಾಲಿನಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆ ಹಾಗೂ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಏರ್ಪಡಿಸಲಾಗಿದೆ.

ಸೆಪ್ಟೆಂಬರ್ ೪ ರಂದು ವೀರಾಜಪೇಟೆ ತಾಲೂಕಿನ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ, ಸೆಪ್ಟೆಂಬರ್ ೫ ರಂದು ಪೊನ್ನಂಪೇಟೆ ತಾಲೂಕಿನ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ, ಸೆಪ್ಟೆಂಬರ್ ೬ ರಂದು ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಸೆಪ್ಟೆಂಬರ್ ೭ ರಂದು ಸೋಮವಾರಪೇಟೆ ತಾಲೂಕಿನ ಕೂಡಿಗೆ ಕ್ರೀಡಾಶಾಲೆ ಹಾಗೂ ಡಯಟ್ ಆಟದ ಮೈದಾನ, ಸೆಪ್ಟೆಂಬರ್ ೮ ರಂದು ಕುಶಾಲನಗರ ತಾಲೂಕಿನ ಕೂಡಿಗೆ ಕ್ರೀಡಾಶಾಲೆ ಹಾಗೂ ಡಯಟ್ ಆಟದ ಮೈದಾನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್ ೧೧ ಮತ್ತು ೧೨ ರಂದು ಕೂಡಿಗೆ ಕ್ರೀಡಾಶಾಲೆ ಹಾಗೂ ಡಯಟ್ ಆಟದ ಮೈದಾನದಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ದೂ.ಸಂ. ಮಹಾಬಲ ೯೯೮೦೮೮೭೪೯೯, ಮಡಿಕೇರಿ ವೆಂಕಟೇಶ್ ೯೮೪೪೩೨೬೦೦೭, ಜಯರಾಂ ೯೪೮೦೦೧೯೮೧೫, ಸೋಮವಾರಪೇಟೆ ಸುಬ್ಬಯ್ಯ ೮೧೯೭೭೯೦೩೫೦ ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ತಿಳಿಸಿದ್ದಾರೆ.