ಕುಶಾಲನಗರ, ಆ. ೨೫: ಕುಶಾಲನಗರದ ಮುಖ್ಯ ರಸ್ತೆಯಲ್ಲಿ ಪೊಲೀಸ್ ಭದ್ರತಾ ಪಡೆಗಳ ಸಿಬ್ಬಂದಿಗಳು ಅಧಿಕಾರಿಗಳು ಪಥಸಂಚಲನ ನಡೆಸಿದರು. ಸುಮಾರು ೬೦೦ಕ್ಕೂ ಅಧಿಕ ಪೊಲೀಸರು ಮತ್ತು ಅಧಿಕಾರಿಗಳು ಬೈಚನಹಳ್ಳಿ ಯಿಂದ ಕುಶಾಲನಗರ ಹೃದಯ ಭಾಗದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜನರಲ್ಲಿ ಧೈರ್ಯ ತುಂಬಿದರು.

ಮೈಸೂರು ದಕ್ಷಿಣ ವಲಯದ ಐಜಿಪಿ ಮಧುಕರ್ ಪವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಅಡಿಷನಲ್ ಎಸ್‌ಪಿ ಸುಂದರ್ ರಾಜ್, ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.