ಕಾಂಗ್ರೆಸ್ ತೊರೆದ ಗುಲಾಂ ನಬಿ ಆಜಾದ್
ಶ್ರೀನಗರ, ಆ. ೨೬: ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷ ತೊರೆದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ನಾಯಕರ ಸರಣಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಮಾಜಿ ಸಚಿವ ಆರ್.ಎಸ್. ಚಿಬ್ ಸೇರಿ ೫ ಕಾಂಗ್ರೆಸ್ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಕಟ್ಟಾ ಕಾರ್ಯಕರ್ತರಾಗಿದ್ದ ಗುಲಾಂ ನಬಿ ಆಜಾದ್ ಅವರು ಇಂದು ಪಕ್ಷದ ಪ್ರಾಥಮಿಕ ಸದಸ್ಯತ್ವವೂ ಸೇರಿದಂತೆ ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷದಿಂದ ಹೊರಬಂದಿದ್ದು, ಇದೀಗ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಪ್ರಮುಖವಾಗಿ ಆಜಾದ್, ತಮ್ಮ ರಾಜೀನಾಮೆಗೆ ರಾಹುಲ್ ಗಾಂಧಿಯೇ ಕಾರಣ ಎಂದು ಸೋನಿಯಾ ಗಾಂಧಿಗೆ ಪತ್ರವನ್ನೂ ಬರೆದಿದ್ದು, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯಾಗಿರುವ ಗುಲಾಂ ನಬಿ ಆಜಾದ್ ತಮ್ಮ ತವರು ನೆಲದಲ್ಲಿ ತಮ್ಮ ಹೊಸ ಪಕ್ಷವನ್ನು ಪ್ರಾರಂಭಿಸಲು ಬಯಸಿದ್ದಾರೆ ಎನ್ನುವ ಊಹಾಪೋಹಗಳ ನಡುವೆಯೇ ಹಲವು ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಮಾಜಿ ಸಚಿವ ಆರ್.ಎಸ್. ಚಿಬ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಸರೂರಿ, ಹಾಜಿ ಅಬ್ದುಲ್ ರಶೀದ್, ಮೊಹಮ್ಮದ್ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ ಮತ್ತು ಚೌಧರಿ ಮೊಹಮ್ಮದ್ ಅಕ್ರಮ್ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ
ಬೆಂಗಳೂರು, ಆ. ೨೬: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬAಧ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಿದ ನ್ಯಾಯಾಲಯ, ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಿದೆ. ತಾ. ೩೧ ರಿಂದ ನಿರ್ದಿಷ್ಟ ಅವಧಿಗೆ ಮಾತ್ರ ಹೈಕೋರ್ಟ್ ಅನುಮತಿ ನೀಡಿದೆ. ವಿವಾದಿತ ಮೈದಾನ ಮಾಲೀಕತ್ವಕ್ಕೆ ಸಂಬAಧಿಸಿದAತೆ ಬಿಬಿಎಂಪಿ ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬAಧ ನಿನ್ನೆ ವಿಚಾರಣೆ ನಡೆಸಿದ ಹೈಕೋರ್ಟ್, ಯಥಾಸ್ಥಿತಿ ಕಾಪಾಡುವಂತೆ ಆದೇಶ ಹೊರಡಿಸಿತ್ತು. ಬಕ್ರೀದ್ ಮತ್ತು ರಂಜಾನ್ ಪ್ರಾರ್ಥನೆಗೆ ಅವಕಾಶ ನೀಡಲಾಗಿತ್ತು. ಗಣೇಶೋತ್ಸವಕ್ಕೆ ಅವಕಾಶ ನೀಡಿರಲಿಲ್ಲ. ಆದರೆ, ಇದೀಗ ನಿನ್ನೆ ನೀಡಿದ್ದ ಆದೇಶ ಮಾರ್ಪಡಿಸಿ ಹೈಕೋರ್ಟ್ ಗಣೇಶೋತ್ಸವ ಆಚರಿಸಲು ಅವಕಾಶ ನೀಡಿದೆ.
ರೈತ ಶಕ್ತಿ ಯೋಜನೆ ಜಾರಿಗೆ
ಬೆಂಗಳೂರು, ಆ. ೨೬: ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಮುಂದಿನ ತಿಂಗಳು ರೈತ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ರೈತರ ಮೇಲಿನ ಆರ್ಥಿಕ ಹೊರೆಯನ್ನು ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ ೨೦೨೨-೨೩ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಈ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ, ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡಲು ರಾಜ್ಯದಲ್ಲಿ ಮೊದಲ ಬಾರಿಗೆ ರೈತ ಶಕ್ತಿ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಪ್ರತಿ ಎಕರೆಗೆ ರೂ.೨೫೦ ಗಳಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ. ಮೂಲಕ ಡೀಸೆಲ್ಗೆ ಸಹಾಯಧನ ನೀಡಲು ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು, ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಜಿಡಿuiಣs ಪೋರ್ಟಲ್ನಲ್ಲಿ ನೋಂದಣಿಗೊAಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ರೈತರು ಹೊಂದಿರುವ ಭೂ ಹಿಡುವಳಿ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ ರೂ. ೨೫೦ ರಂತೆ ಗರಿಷ್ಠ ಐದು ಎಕರೆಗೆ ರೂ. ೧೨೫೦ ವರೆಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಭಾರತದ ಆರ್ಥಿಕತೆ ಬೆಳವಣಿಗೆ ಸಾಧಿಸಲಿದೆ - ನಿರ್ಮಲಾ
ಮುಂಬೈ, ಆ. ೨೬: ಈ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇ. ೭.೪ ರಷ್ಟು ಬೆಳವಣಿಗೆ ಸಾಧಿಸಲಿದೆ ಮತ್ತು ಮುಂದಿನ ಹಣಕಾಸು ವರ್ಷದಲ್ಲೂ ಇದೇ ಬೆಳವಣಿಗೆ ಮುಂದುವರಿಯಲಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಇಂದು ಎಫ್.ಇ. ಬೆಸ್ಟ್ ಬ್ಯಾಂಕ್ಸ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ಅಭಿವೃದ್ಧಿಯ ಆಧಾರದ ಮೇಲೆ ನಮ್ಮ ಸ್ವಂತ ಅಂದಾಜುಗಳು ಈ ಬೆಳವಣಿಗೆಯನ್ನು ತೋರಿಸಿವೆ. ನಾವು ಖಂಡಿತವಾಗಿಯೂ ಶೇ. ೭.೪ ಅಭಿವೃದ್ಧಿ ಸಾಧಿಸುತ್ತೇವೆ ಮತ್ತು ಮುಂದಿನ ವರ್ಷವೂ ಇದು ಮುಂದುವರಿಯುತ್ತದೆ ಎಂದು ತಿಳಿಸಿದರು. ಅಂರ್ರಾಷ್ಟಿçÃಯ ಹಣಕಾಸು ನಿಧಿ ಮತ್ತು ವಿಶ್ವಬ್ಯಾಂಕ್ ಮುಂದಿನ ಎರಡು ಆರ್ಥಿಕ ವರ್ಷಗಳಲ್ಲಿ ಭಾರತದ ಬೆಳವಣಿಗೆಯು ಅತ್ಯಂತ ವೇಗವಾಗಿರಲಿದೆ ಎಂದು ಅಂದಾಜಿಸಿವೆ. ಅವರ ಅಂದಾಜುಗಳು ಭಾರತೀಯ ರಿಸರ್ವ್ ಬ್ಯಾಂಕ್ ಜೊತೆಗೆ ಹೊಂದಾಣಿಕೆಯಾಗುತ್ತಿದೆ ಎಂದು ಹೇಳಿದ್ದಾರೆ. ಜಾಗತಿಕ ಪರಿಸ್ಥಿತಿಯು ಸವಾಲಿನಿಂದ ಕೂಡಿದೆ. ಜಾಗತಿಕ ಬೆಳವಣಿಗೆ ಕುಂಠಿತವಾಗುವುದರಿAದ ರಫ್ತು ವಲಯವು ತೊಂದರೆಗಳನ್ನು ಎದುರಿಸಲಿದೆ. ಹೀಗಾಗಿ ಸರ್ಕಾರ ಅಂತಹ ಘಟಕಗಳೊಂದಿಗೆ ಕೆಲಸ ಮಾಡುತ್ತದೆ ಎಂದು ಕೇಂದ್ರ ಸಚಿವೆ ತಿಳಿಸಿದ್ದಾರೆ.
ಒಂದೇ ಕುಟುಂಬದ ಆರು ಮಂದಿಯ ನಿಗೂಢ ಸಾವು
ಅಂಬಾಲ, ಆ. ೨೬: ಹರಿಯಾಣದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಸಾವನ್ನಪ್ಪಿದ್ದು, ಶುಕ್ರವಾರ ಬೆಳಗ್ಗೆ ಅಂಬಾಲ ನಗರ ಸಮೀಪದ ಹಳ್ಳಿಯೊಂದರ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸುಖ್ವಿಂದರ್ ಸಿಂಗ್ (೩೪), ಅವರ ಪತ್ನಿ ರೀನಾ (೨೮), ಅವರ ಪುತ್ರಿಯರಾದ ಆಶು (೫) ಮತ್ತು ಜಸ್ಸಿ (೭), ಅವರ ತಂದೆ ಸಂಗತ್ ಸಿಂಗ್ (೬೫), ತಾಯಿ ಮಹೀಂದ್ರೋ ಕೌರ್ (೬೦) ಎಂದು ಗುರುತಿಸಲಾಗಿದೆ. ಠಾಣಾಧಿಕಾರಿ ಮನೀಶ್ ಕುಮಾರ್ ಮಾತನಾಡಿ, ಬಾಲಾನಾ ಗ್ರಾಮದ ಕೆಲವು ಸ್ಥಳೀಯರು ಘಟನೆಯ ಬಗ್ಗೆ ಬೆಳಿಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಬಳಿಕ ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆರು ಶವಗಳು ಪತ್ತೆಯಾಗಿವೆ. ಸುಖ್ವಿಂದರ್ ಕೊಠಡಿಯೊಂದರಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬAದರೆ, ಕುಟುಂಬದ ಇತರ ಸದಸ್ಯರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಅವರು ಹೇಳಿದರು.
ಲೋಕಾಯುಕ್ತಕ್ಕೆ ಹೆಚ್ಚಿನ ಸಿಬ್ಬಂದಿಗಳ ನೇಮಕ
ಬೆಂಗಳೂರು, ಆ. ೨೬: ಕರ್ನಾಟಕ ಲೋಕಾಯುಕ್ತವನ್ನು ಬಲಪಡಿಸಲು ಮುಂದಿನ ದಿನಗಳಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. ಈ ಕುರಿತಂತೆ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಾಹಿತಿ ನೀಡಿದ್ದು, ಕರ್ನಾಟಕ ಲೋಕಾಯುಕ್ತವನ್ನು ಬಲಪಡಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಭ್ರಷ್ಟಾಚಾರ ನಿಗ್ರಹ ದಳಕ್ಕೆ ಖಾತೆ ಮತ್ತು ಪ್ರಾಸಿಕ್ಯೂಷನ್ಗೆ ಸಿಬ್ಬಂದಿ ನೇಮಕಾತಿಗೆ ಅನುಮೋದನೆ ನೀಡಿದೆ. ನಿವೃತ್ತರಾಗಿರುವ ಏಳು ಲೆಕ್ಕ ಪರಿಶೋಧಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ಮತ್ತು ಲೋಕಾಯುಕ್ತದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಬ್ಲಿಕ್ ಪ್ರಾಸಿಕ್ಯೂಟರ್ಗಳನ್ನು ಮುಂದಿನ ವರ್ಷಕ್ಕೆ ನವೀಕರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಅಂತೆಯೇ "ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಕಾರ್ಯದರ್ಶಿಗೆ ಲೋಕಾಯುಕ್ತದಿಂದ ಅಗತ್ಯತೆಗಳ ವಿವರಗಳನ್ನು ತೆಗೆದುಹಾಕಲು ಸೂಚಿಸಲಾಗಿದೆ ಮತ್ತು ರಾಜ್ಯ ಸರ್ಕಾರವು ಅವುಗಳನ್ನು ಪರಿಹರಿಸುತ್ತದೆ ಎಂದು ಹೇಳಿದರು.