ಮಡಿಕೇರಿ, ಆ. ೨೫: ಸಾಹಿತ್ಯ, ಸಂಗೀತ, ಕಲೆ, ಕ್ರೀಡೆ ಹೀಗೆ ವಿವಿಧ ಚಟುವಟಿಕೆಗಳಲ್ಲಿ ಗೆದ್ದವರನ್ನು ಪ್ರೋತ್ಸಾಹಿಸಬೇಕು. ಸೋತವರು ಪ್ರಯತ್ನ ಮುಂದುವರೆಸಬೇಕು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸಲಹೆ ನೀಡಿದರು.
ಸ್ವಾತಂತ್ರö್ಯ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಹಾಗೂ ಜಿಲ್ಲಾ ಬಾಲಭವನ ಸಂಸ್ಥೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆದ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
೫ನೇ ತರಗತಿವರೆಗೆ ಮಕ್ಕಳು ಶಾಲೆಯಲ್ಲಿ ಓದುವುದರ ಜೊತೆಗೆ, ಶಾಲೆಯಲ್ಲಿಯೇ ಹೋಂ ವರ್ಕ್ ಮಾಡಿಕೊಳ್ಳಬೇಕು. ಉಳಿದಂತೆ ಕ್ರೀಡೆ ಸೇರಿದಂತೆ ವಿವಿಧ ಚಟುವಟಿಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಓದಿನ ಜೊತೆಗೆ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ತೊಡಗಿಸಿ ಕೊಳ್ಳುವುದರಿಂದ ಶಾಲೆಗೆ ಮತ್ತು ಪೋಷಕರಿಗೆ ಒಳ್ಳೆಯ ಹೆಸರು ತರುವಂತಾಗಬೇಕು ಎಂದು ಹೇಳಿದರು.
ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷ ರವೀಂದ್ರ ರೈ ಮಾತನಾಡಿ, ಮಕ್ಕಳು ಕ್ರೀಡೆ ಸೇರಿದಂತೆ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸುವು ದರಿಂದ ಹೆಚ್ಚಿನ ಆತ್ಮವಿಶ್ವಾಸ ಮೂಡುತ್ತದೆ ಎಂದು ಅಭಿಪ್ರಾಯಪಟ್ಟರು.
ಸಂಗೀತ ಶಿಕ್ಷಕಿ ಭಾರತಿ ರಮೇಶ್ ಮಾತನಾಡಿ, ಪ್ರತಿಯೊಬ್ಬರಲ್ಲಿ ಪ್ರತಿಭೆ ಇದ್ದು, ಚಿಕ್ಕಂದಿನಿAದಲೇ ಮಕ್ಕಳಿಗೆ ಸಲಹೆ, ಮಾರ್ಗದರ್ಶನ ನೀಡುವಂತಾಗಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎನ್. ಮಂಜುನಾಥ್, ನಗರಸಭೆಯ ಎಇಇ ರಾಜೇಂದ್ರ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾಷಾ, ನೃತ್ಯ ಶಿಕ್ಷಕ ಭರತ್, ಕಾರ್ಯಕ್ರಮ ಅಧಿಕಾರಿ ಪೂಣಚ್ಚ, ಬಾಲಭವನ ಸೊಸೈಟಿಯ ಪೂಜಾ, ಇತರರು ಇದ್ದರು. ಶಿಶು ಕಲ್ಯಾಣ ಸಂಸ್ಥೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸತ್ಯಭಾಮ ನಿರೂಪಿಸಿದರು. ಜಯಂತಿ ವಂದಿಸಿದರು.