ಕುಶಾಲನಗರ, ಆ. ೨೬: ಸೋಮವಾರಪೇಟೆ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕುಶಾಲನಗರ ಕನ್ನಡ ಭಾರತಿ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಾದಾಪುರ ಕಾಲೇಜಿನ ವಿದ್ಯಾರ್ಥಿಗಳ ತಂಡವನ್ನು ೩೫-೧೮/ ೩೫-೧೫ ಅಂಕಗಳಿಸುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುವುದಾಗಿ ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.