ಸೋಮವಾರಪೇಟೆ, ಆ. ೨೬: ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಗುರುವಾರ ನಡೆದ ವಲಯ ಮಟ್ಟದ ಕ್ರೀಡಾಕೂಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್‌ನ ಪ್ರಶಸ್ತಿಯನ್ನು ಚೌಡ್ಲು ವಿಶ್ವಮಾನವ ಕುವೆಂಪು ಆಂಗ್ಲಮಾದ್ಯಮ ಶಾಲೆಯ ತಂಡ ಮುಡಿಗೇರಿಸಿಕೊಂಡಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಾಲಕರ ವಿಭಾಗದಲ್ಲಿ ಚೌಡ್ಲು ಸಾಂದೀಪನಿ ಆಂಗ್ಲಮಾಧ್ಯಮ ಶಾಲೆ ಪ್ರಥಮ, ಐಗೂರು ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಗಳಿಸಿತು.

ಬಾಲಕಿಯರ ಥ್ರೋಬಾಲ್‌ನಲ್ಲಿ ಎಸ್.ಜೆ.ಎಂ. ಪ್ರೌಢಶಾಲೆ ಪ್ರಥಮ, ಐಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ. ಬಾಲಕರ ವಿಭಾಗದಲ್ಲಿ ನೇರುಗಳಲೆ ಸರ್ಕಾರಿ ಪ್ರೌಢಶಾಲೆ ಪ್ರಥಮ, ಮಸಗೋಡು ಚನ್ನಮ್ಮ ಆಂಗ್ಲಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಪಡೆಯಿತು.

ಬಾಲಕರ ಹಾಕಿ ಪಂದ್ಯಾಟದಲ್ಲಿ ಸೋಮವಾರಪೇಟೆ ಓ.ಎಲ್.ವಿ. ತಂಡ ಪ್ರಥಮ ಹಾಗು ಕಿರಗಂದೂರು ಸರ್ಕಾರಿ ಪ್ರೌಢಶಾಲೆ ದ್ವಿತೀಯ ಸ್ಥಾನ ಪಡೆಯಿತು.

ಮಸಗೋಡು ಚನ್ನಮ್ಮ ಶಾಲೆಯಲ್ಲಿ ನಡೆದ ಕಬಡ್ಡಿ ಪಂದ್ಯಾಟದ ಬಾಲಕರ ವಿಭಾಗದಲ್ಲಿ ವಿಶ್ವಮಾನವ ಕುವೆಂಪು ಆಂಗ್ಲ ಮಾಧ್ಯಮ ಶಾಲೆ ಪ್ರಥಮ, ಜ್ಞಾನವಿಕಾಸ ಆಂಗ್ಲಮಾಧ್ಯಮ ಶಾಲಾ ತಂಡ ದ್ವಿತೀಯ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ನೇರುಗಳಲೆ ಸರ್ಕಾರಿ ಪ್ರೌಢಶಾಲೆ ಪ್ರಥಮ ಹಾಗೂ ವಿಶ್ವಮಾನವ ಕುವೆಂಪು ಶಾಲೆ ದ್ವಿತೀಯ ಸ್ಥಾನ ಪಡೆಯಿತು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವೇದಣ್ಣ, ಕ್ರೀಡಾಕೂಟದ ಸಂಚಾಲಕರಾದ ಸಂತೋಷ್ ಹಿರೇಮಠ್, ವಲಯ ಕಾರ್ಯದರ್ಶಿ ದೈಹಿಕ ಶಿಕ್ಷಣ ಶಿಕ್ಷಕರಾದ ಎಚ್.ಬಿ.ಕೃಷ್ಣಪ್ಪ, ಚಂದ್ರಾವತಿ, ಮಂಜುನಾಥ್, ಇಂದಿರಾ, ಹರೀಶ್, ಸಂತೋಷ್, ಗಣೇಶ್, ರೇವಣ್ಣ ಸಿದ್ದಯ್ಯ, ಕುಶಾಲಪ್ಪ, ವಾಸಂತಿ, ಗಿರೀಶ್, ಅಮೃತ್ ಕಾರ್ಯನಿರ್ವಹಿಸಿದರು.