ಕಣಿವೆ, ಆ. ೨೬: ಬದಲಾಗುತ್ತಿರುವ ಆಧುನಿಕ ಜೀವನ ಶೈಲಿಯಿಂದಾಗಿ ಜಾನಪದ ಕಲೆಗಳು, ಆಚಾರ - ವಿಚಾರಗಳು ನಶಿಸುತ್ತಿವೆ ಎಂದು ಸರ್ಕಾರಿ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಹೆಚ್.ಬಿ. ಲಿಂಗಮೂರ್ತಿ ವಿಷಾದಿಸಿದರು.
ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೂಡಿಗೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಡಿ.ಜೆ. ಪದ್ಮನಾಭ ದತ್ತಿ ಕಾರ್ಯಕ್ರಮದಲ್ಲಿ ಕೊಡಗಿನ ಜಾನಪದ ಕಲೆಗಳ ಬಗ್ಗೆ ಉಪನ್ಯಾಸ ನೀಡಿದ ಅವರು, ಇಂದು ವಿದ್ಯಾರ್ಥಿಗಳಲ್ಲಿ ನಾಡಿನ ಭವ್ಯ ಪರಂಪರೆ ಹಾಗೂ ಸಾಹಿತ್ಯ ಸಂಸ್ಕೃತಿಯ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಹೆಚ್ಚು ಹೆಚ್ಚಾಗಿ ಆಗಬೇಕಿದೆ ಎಂದರು.
ಪ್ರಾಸ್ತಾವಿಕ ನುಡಿಗಳಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವಕಾಮತ್, ೧೯೭೦ ರ ದಶಕದಲ್ಲಿ ಕನ್ನಡ ಸಾಹಿತ್ಯವನ್ನು ಕೊಡಗು ಜಿಲ್ಲೆಯಲ್ಲಿ ಕಟ್ಟಿ ಬೆಳೆಸಿದ ವೀರಾಜಪೇಟೆಯ ಡಿ.ಜೆ. ಪದ್ಮನಾಭ ಅವರ ಕನ್ನಡ ನಾಡು ನುಡಿ ಸೇವೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕೂಡಿಗೆಯ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಕೆ.ಬಿ. ಬಸಪ್ಪ ಮಾತನಾಡಿ, ಕನ್ನಡ ನಾಡಿನ ಭವ್ಯ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ಜಾನಪದ ಕಲೆಗಳು ಹಾಗೂ ಜಾನಪದ ಕ್ರೀಡೆಗಳು ಅತ್ಯಂತ ಹೆಚ್ಚು ಪಾತ್ರ ವಹಿಸಿವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಮೂರ್ತಿ ಮಾತನಾಡಿ, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕನ್ನಡ ಭಾಷೆಯ ದಿನ ಪತ್ರಿಕೆಗಳನ್ನು ಸ್ಪಷ್ಟವಾಗಿ ಓದುವ ಹವ್ಯಾಸ ಬೆಳೆಸಿಕೊಂಡು ಲೋಕ ಜ್ಞಾನ ಪಡೆದುಕೊಂಡಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂದರು.
ಡಿ.ಜೆ. ಪದ್ಮನಾಭ ದತ್ತಿಯ ದಾನಿಗಳು ಹಾಗೂ ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಜೇಶ್ ಪದ್ಮನಾಭ, ಕೋಶಾಧಿಕಾರಿ ಶಭರೀಶ್ ಶೆಟ್ಟಿ, ಕುಶಾಲನಗರ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ನಿರ್ದೇಶಕ ವಿ.ಟಿ. ಮಂಜುನಾಥ, ಕುಶಾಲನಗರ ತಾಲೂಕಿನ ಕೋಶಾಧಿಕಾರಿ ಕೆ.ವಿ.ಉಮೇಶ್, ಹೆಬ್ಬಾಲೆ ಹೋಬಳಿ ಕಸಾಪ ಅಧ್ಯಕ್ಷ ಎಂ.ಎನ್.ಮೂರ್ತಿ, ಕಸಾಪ ಮಾಜಿ ಅಧ್ಯಕ್ಷ ಟಿ.ಕೆ. ಪಾಂಡುರAಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಬಿ.ಎಸ್. ನಿಸರ್ಗ ಸ್ವಾಗತಿಸಿ, ಎಂ.ಎಸ್. ಯುಕ್ತ ನಿರೂಪಿಸಿ, ಧನಲಕ್ಷಿö್ಮ ವಂದಿಸಿದರು.