ಮಡಿಕೇರಿ, ಆ. ೨೫: ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ೨೦೨೧-೨೨ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ತಾ. ೨೬ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆಯಲಿದೆ.
ಶಾಸಕ ಎಂ.ಪಿ .ಅಪ್ಪಚ್ಚು ರಂಜನ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಕೆ.ಡಿ. ನಿರ್ಮಲ ಇತರರು ಪಾಲ್ಗೊಳ್ಳಲಿದ್ದಾರೆ.