ಮಡಿಕೇರಿ, ಆ. ೨೬: ಎ.ಕೆ. ಸುಬ್ಬಯ್ಯ ಪೊನ್ನಮ್ಮ ದತ್ತಿ ಮತ್ತು ಶೈಕ್ಷಣಿಕ ಟ್ರಸ್ಟ್ ಹಾಗೂ ‘eviಜhಥಿಚಿ.ಛಿom’ ವತಿಯಿಂದ ಶಕ್ತಿ ದಿನಪತ್ರಿಕೆಯ ಸಹಯೋಗದಲ್ಲಿ ಪ್ರತಿಭಾನ್ವಿತ ಬಡ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ತಾ.೨೭ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಹುದಿಕೇರಿ ಕೊಡವ ಸಮಾಜದಲ್ಲಿ ನಡೆಯಲಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಒಟ್ಟು ೧೫ ಆಯ್ದ ವಿದ್ಯಾರ್ಥಿನಿಯರಿಗೆ ತಮ್ಮ ಪದವಿ ಶಿಕ್ಷಣಕ್ಕಾಗಿ ೩ ವರ್ಷಗಳ ಕಾಲ ವಿದ್ಯಾರ್ಥಿ ವೇತನ ದೊರಕಲಿದ್ದು, ಮೊದಲನೆಯ ವರ್ಷಕ್ಕೆ ಇಂದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಗುವುದು. ಇದರೊಂದಿಗೆ ಕಳೆದ ಬಾರಿ ಮೊದಲನೆಯ ವರ್ಷದ ವಿದ್ಯಾರ್ಥಿ ವೇತನ ಪಡೆದ ಒಟ್ಟು ೪೫ ಪದವಿ ವಿದ್ಯಾರ್ಥಿನಿಯರಿಗೆ ೨ನೇ ವರ್ಷದ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಮ್ಯಾನೆಜಿಂಗ್ ಟ್ರಸ್ಟಿ ಎ.ಎಸ್. ಪೊನ್ನಣ್ಣ ಅವರು ತಿಳಿಸಿದ್ದಾರೆ. ಈ ಬಾರಿ ಆಯ್ಕೆಯಾದ ೧೫ ವಿದ್ಯಾರ್ಥಿಗಳಿಗೆ ಈಗಾಗಲೇ ಕರೆ ಮಾಡಿ ಆಯ್ಕೆಯ ಬಗ್ಗೆ ಮಾಹಿತಿ ನೀಡಲಾಗಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಾಫಿ ಬೆಳೆಗಾರರಾದ ಚೆಕ್ಕೇರ ಸೋಮಯ್ಯ, ಅಜ್ಜಿಕುಟ್ಟೀರ ಪೊನ್ನಪ್ಪ ಭಾಗವಹಿಸಲಿದ್ದಾರೆ.