ಮಡಿಕೇರಿ, ಆ. ೨೫ : ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ಸಾರ್ವಜನಿಕರು ಪಾಲ್ಗೊಂಡು ಕೊಡಗಿನ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ.
ಕೊಡಗು ಜಿಲ್ಲೆಯ ಎರಡು ಸ್ಥಳಗಳು ಈಗಾಗಲೇ ಕರ್ನಾಟಕದ ನೂರು ಅದ್ಭುತಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಈ ಎರಡು ಸ್ಥಳಗಳಿಗೆ ವೋಟ್ ಮಾಡುವ ಮೂಲಕ ಇವುಗಳನ್ನು ರಾಜ್ಯದ ಅದ್ಭುತವನ್ನಾಗಿ ಮಾಡಬಹುದು.
ಕೊಡಗಿನ ನಾಮನಿರ್ದೇಶನಗಳು : ಕೊಡಗು ಜಿಲ್ಲೆಗೆ ಹೊಂದಿಕೊAಡಿರುವ ಪ್ರಮುಖ ಆಕರ್ಷಣೆ ಟಿಬೆಟ್ ನಿರಾಶ್ರಿತರ ಧಾರ್ಮಿಕ ಸ್ಥಳ ಬೈಲುಕುಪ್ಪೆಯ ಕುಳಿತ ಭಂಗಿಯಲ್ಲಿರುವ ಬುದ್ಧನ ಸ್ವರ್ಣ ದೇಗುಲ ಹಾಗೂ ಕೊಡಗಿನ ಅತ್ಯಂತ ಎತ್ತರದ ಪ್ರದೇಶ, ಕರ್ನಾಟಕದ ಮೂರನೆ ಅತಿ ಎತ್ತರದ ಬೆಟ್ಟ ತಡಿಯಂಡಮೋಳ್.
ಈಗಾಗಲೇ :hಣಣಠಿs://ತಿತಿತಿ.೭ತಿoಟಿಜeಡಿsoಜಿಞಚಿಡಿಟಿಚಿಣಚಿಞಚಿ.ಛಿom/ ನಲ್ಲಿ ನಾಮನಿರ್ದೇಶನಗೊಂಡಿರುವ ನೂರು ಅದ್ಭುತಗಳ ಸಾಲಿನಲ್ಲಿ ನಿಂತಿರುವ ಕೊಡಗಿನ ಈ ಎರಡು ಸ್ಥಳಗಳ ಪೈಕಿ ನಿಮ್ಮ ಆಯ್ಕೆಯ ಸ್ಥಳಕ್ಕೆ ತಲಾ ೧೦ ವೋಟ್ ಮಾಡಿ ರಾಜ್ಯದ ಏಳು ಅದ್ಭುತಗಳನ್ನಾಗಿಸಬಹುದು.
ಪ್ರಸ್ತುತ ೧೦೦ ಅದ್ಭುತಗಳ ಪಟ್ಟಿಯಲ್ಲಿರುವ ಸ್ಥಳಗಳಲ್ಲಿ ಅತಿ ಹೆಚ್ಚು ವೋಟ್ ಪಡೆದ ಸ್ಥಳಗಳು ಮುಂದಿನ ಹಂತದಲ್ಲಿ ಅಂತಿಮ ೪೯ರಪಟ್ಟಿಗೆ ಬರಲಿವೆ. ತದನಂತರ ಅಂತಿಮ ೨೧ರ ಪಟ್ಟಿಯಲ್ಲಿ ಉಳಿದು ಬಳಿಕ ಪ್ರವಾಸೋದ್ಯಮ ಇಲಾಖೆ ತಜ್ಞರ ಸಮಿತಿಯ ಆಯ್ಕೆಯಂತೆ ಕರ್ನಾಟಕದ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಬಹುದು. ಹೀಗಾಗಿ ಕೊಡಗು ಜಿಲ್ಲೆಯ ಪ್ರತಿಯೊಬ್ಬರೂ ತಮ್ಮ ಪಾಲಿನ ಹತ್ತು ವೋಟ್ಗಳನ್ನು ತಮ್ಮ ನೆಚ್ಚಿನ ಸ್ಥಳಕ್ಕೆ ನೀಡಬಹುದು. ಜತೆಗೆ ಸ್ನೇಹಿತರು, ಕುಟುಂಬ ಸದಸ್ಯರೂ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬಹುದು.
ಏನಿದು ಅಭಿಯಾನ?: ಪ್ರಪಂಚದ ಏಳು ಅದ್ಭುತಗಳನ್ನು ಎಂದೋ ಹುಡುಕಿಯಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವದಲ್ಲಿ ಈ ವಿಶಿಷ್ಟ ಅಭಿಯಾನ ಹಮ್ಮಿಕೊಂಡಿದೆ.
'ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು' ಎಂದೇ ಪ್ರಸಿದ್ಧಿ. ಇಂತಹ ಕರ್ನಾಟಕದ ಸುಂದರ ಕರಾವಳಿ ತೀರ, ದುರ್ಗಮ ಕಾನನಗಳು, ರಮಣೀಯ ಜಲಪಾತಗಳು, ಸಮುದ್ರ ತೀರಗಳು, ಐತಿಹಾಸಿಕ ಸ್ಥಳಗಳನ್ನು ಇಂತಹ ಹಲವು ಜಗತ್ತುಗಳನ್ನು ಒಳಗೊಂಡಿದೆ. ಈ ಪೈಕಿ ಏಳು ಅದ್ಭುತಗಳನ್ನು ಸಾರ್ವಜನಿಕರೇ ಗುರುತಿಸಲು ರೂಪಿಸಿರುವ ವೇದಿಕೆಯೇ 'ಬನ್ನಿ ಹುಡುಕೋಣ ಕರ್ನಾಟಕದ ಏಳು ಅದ್ಭುತಗಳನ್ನು' ಎಂಬ ಈಅಭಿಯಾನ.
ವೋಟಿಂಗ್ ನಿಯಮ:
* ಆಯ್ಕೆಯಾಗಿರುವ ನೂರು ಅದ್ಭುತಗಳಿಗೂ ವೋಟ್ ಹಾಕಬಹುದು.
* ಪ್ರತಿಯೊಂದು ಅದ್ಭುತಕ್ಕೂ ಹತ್ತು ವೋಟ್ ಮಾಡಲು ಅವಕಾಶವಿರುತ್ತದೆ.
* ಈ ಮೆಗಾ ಅಭಿಯಾನದ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದವರಿಗೂ ತಿಳಿಸಿ.
* ತನ್ಮೂಲಕ ನಿಮ್ಮ ಜಿಲ್ಲೆಯ ಸ್ಥಳವನ್ನು ಅದ್ಭುತವನ್ನಾಗಿಸಬಹುದಾಗಿದೆ.