ಮಡಿಕೇರಿ, ಆ. ೨೫: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇತ್ತೀಚೆಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಪ್ರತಿಭಟನೆಯಲ್ಲಿ ಕೊಡಗಿನಾದ್ಯಂತ ಈಗಾಗಲೇ ತಾ. ೨೭ರ ಸಂಜೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಖಾಕಿ ಸರ್ಪಗಾವಲನ್ನು ಹಾಕಲಾಗಿದೆ.
ಈ ನಡುವೆ ಇಂದು ನಗರ ವ್ಯಾಪ್ತಿಯಲ್ಲಿ ಪೊಲೀಸ್ ಪಡೆಯಿಂದ ಪಥಸಂಚಲನ ನಡೆಯಿತು. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ಕುಮಾರ್ ಮುಂದಾಳತ್ವದಲ್ಲಿ ಮಡಿಕೇರಿ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಯಿತು. ಈ ವೇಳೆ ಮಾತನಾಡಿದ ಅಲೋಕ್ಕುಮಾರ್ ಅವರು, ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಕೊಡಗು ಸೂಕ್ಷö್ಮ ಜಿಲ್ಲೆಯಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕಾಗಿ ನಿಷೇಧಾಜ್ಞೆ ಜಾರಿಯೊಂದಿಗೆ ಸಾವಿರಕ್ಕೂ ಅಧಿಕ ಪೊಲೀಸರನ್ನು ಬಳಸಿಕೊಂಡು ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಕೊಡಗಿನಲ್ಲಿ ೧೬ ಕಡೆ ಚೆಕ್ಪೋಸ್ಟ್ಗಳನ್ನು ತೆರೆದು ಬಿಗಿ ತಪಾಸಣೆ ಕೈಗೊಳ್ಳಲಾಗಿದೆ. ಜನತೆ ಆತಂಕಪಡುವ ಅಗತ್ಯವಿಲ್ಲ. ಸಾರ್ವಜನಿಕ ರಕ್ಷಣೆಗೆ ಪೊಲೀಸ್ ಇಲಾಖೆ ಸಿದ್ಧವಿದೆ. ಎಂತಹ ಸನ್ನಿವೇಶ ಎದುರಾದರೂ ಅದನ್ನು ಎದುರಿಸುವ ಸಾಮರ್ಥ್ಯ ಪೊಲೀಸ್ ಇಲಾಖೆಗೆ ಇದೆ. ಯಾವುದೇ ಕಿಡಿಗೇಡಿಗಳು ಸಮಸ್ಯೆ ಸೃಷ್ಟಿ ಮಾಡಿದರೆ, ಅಂತಹವರ ವಿರುದ್ಧ ಕ್ರಮತೆಗೆದುಕೊಳ್ಳಬೇಕಾಗುತ್ತದೆ ಎಂದು ಅಲೋಕ್ಕುಮಾರ್ ಎಚ್ಚರಿಕೆ ನೀಡಿದರು. ಕರಿಕೆ, ಮಾಕುಟ್ಟ ಚೆಕ್ಪೋಸ್ಟ್ ಸೇರಿದಂತೆ ಎಲ್ಲಾ ಚೆಕ್ಪೋಸ್ಟ್ಗಳಲ್ಲೂ ತಪಾಸಣೆಯನ್ನು ಕಟ್ಟುನಿಟ್ಟಾಗಿ ಮಾಡಲಾಗುತ್ತದೆ. ಐಜಿ ಮಧುಕರ್ ಪವಾರ್ ಅವರು ಜಿಲ್ಲೆಯಲ್ಲಿ ಹಾಜರಿದ್ದು, ಬಂದೋಬಸ್ತ್ ಉಸ್ತುವಾರಿಯನ್ನು ನಿಭಾಯಿಸಲಿದ್ದಾರೆ ಎಂದು ಅವರು ತಿಳಿಸಿದರು.
ಈ ಸಂದರ್ಭ ಐಜಿಪಿ ಪ್ರವೀಣ್ ಮಧುಕರ್ ಪವಾರ್, ಎಸ್ಪಿ ಎಂ.ಎ. ಅಯ್ಯಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ರಾಜ್ ಹಾಜರಿದ್ದರು.
ಗಡಿಯಲ್ಲಿ ತಪಾಸಣೆ
ಕರಿಕೆ ಚೆಕ್ಪೋಸ್ಟ್ನÀಲ್ಲಿ ಜಿಲ್ಲೆಗೆ ಕೇರಳದಿಂದ ಆಗಮಿಸುವ ಪ್ರತಿ ವಾಹನಗಳ ಮೇಲೆ ನಿಗಾವಹಿಸಲಾಗಿದೆ. ವೀಡಿಯೋ ಚಿತ್ರೀಕರಣದೊಂದಿಗೆ ವಾಹನ ಹಾಗೂ ದಾಖಲಾತಿಗಳ ತಪಾಸಣೆ ನಡೆಸಲಾಗುತ್ತಿದೆ. ಭಾಗಮಂಡಲ ಪೊಲೀಸ್ ಉಪನಿರೀಕ್ಷಕಿ ಪ್ರಿಯಾಂಕ ತ್ಯಾಗರಾಜ್ ನೇತೃತ್ವದಲ್ಲಿ ಸಹಾಯಕ ನಿರೀಕ್ಷಕ ಬೆಳ್ಳಿಯಪ್ಪ ಹಾಗೂ ಸಿಬ್ಬಂದಿ ಬಿಗಿ ಬಂದೋಬಸ್ತ್ನಲ್ಲಿ ತೊಡಗಿದ್ದು, ಒಟ್ಟು ಮೂರು ಪಾಳಿಯಲ್ಲಿ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿರುವುದಾಗಿ ಉಪನಿರೀಕ್ಷಕರು ‘ಶಕ್ತಿ'ಗೆ ಮಾಹಿತಿ ನೀಡಿದ್ದಾರೆ.