ಮಡಿಕೇರಿ, ಆ.೨೫: ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ೨೫ ಸಾವಿರ ರೂ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ೧ ಲಕ್ಷ ರೂ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸುತ್ತದೆ.
ಪ್ರಸಕ್ತ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ, ದೂರವಾಣಿ ೦೮೨೭೨-೨೯೮೩೭೯ ಈ ವಿಳಾಸಕ್ಕೆ ಸೆಪ್ಟೆಂಬರ್ ೩೧ ರೊಳಗೆ ಸಲ್ಲಿಸಬೇಕು.
ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಅರ್ಜಿಗಳು ಕನ್ನಡ ಭಾಷೆಯಲ್ಲಿಯೇ ಸಲ್ಲಿಸತಕ್ಕದ್ದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.