ಸೋಮವಾರಪೇಟೆ, ಆ. ೨೭: ವಿಶ್ವ ಹಿಂದೂ ಪರಿಷತ್, ಭಜರಂಗದಳ, ದುರ್ಗಾವಾಹಿನಿ ಮಾತೃಶಕ್ತಿ ಸೋಮವಾರಪೇಟೆ ಪ್ರಖಂಡದ ವತಿಯಿಂದ ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ವಿಶ್ವ ಹಿಂದೂ ಪರಿಷತ್ ಸಂಸ್ಥಾಪನಾ ದಿನಾಚರಣೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವ ಹಿಂದೂ ಪರಿಷತ್ ತಾಲೂಕು ಉಪಾಧ್ಯಕ್ಷ ನತೀಶ್ ಮಂದಣ್ಣ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಕೆ.ಜಿ. ಸುರೇಶ್, ಆರ್.ಎಸ್.ಎಸ್. ಜಿಲ್ಲಾ ಸಂಪರ್ಕ ಸಹ ಪ್ರಮುಖರಾದ ಪಿ.ಕೆ ರವಿ ಹಾಗೂ ಭಾಸ್ಕರ್ ಅವರುಗಳು ದಿನದ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ದುರ್ಗಾವಾಹಿನಿ ಸಂಯೋಜಕಿ ಪವಿತ್ರ ಶೇಷಾದ್ರಿ, ಸೇರಿದಂತೆ ಇತರರು ಉಪಸ್ಥಿತರಿದ್ದರು. ೩೭ ಮಕ್ಕಳು ಕೃಷ್ಣ-ರಾಧೆ ವೇಷ ಧರಿಸಿ ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.