ಡಾ. ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ ಪ್ರಕರಣ

ಮೈಸೂರು, ಆ. ೨೭: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೊ) ಅಡಿ ದೂರು ದಾಖಲಾಗಿದೆ. ವಿದ್ಯಾರ್ಥಿನಿಯರ ಮೇಲೆ ಕಳೆದ ಕೆಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೈಸೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಲಯದ ಮಾರ್ಗದರ್ಶನದಂತೆ ಇದೀಗ ಎಫ್‌ಐಆರ್ ಪ್ರತಿಯನ್ನು ಚಿತ್ರದುರ್ಗದ ಎಸ್ಪಿಗೆ ಕಳುಹಿಸಲಾಗಿದೆ. ಸ್ವಾಮೀಜಿಯ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆ (ಪೋಕ್ಸೊ) ಅಡಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದು, ಚಿತ್ರದುರ್ಗದಲ್ಲಿ ಮಠ ನಡೆಸುತ್ತಿರುವ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್ ರಶ್ಮಿ ಎರಡನೇ ಆರೋಪಿಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಮಾಡುತ್ತಿರುವುದಾಗಿ, ಅದಕ್ಕೆ ಉಳಿದ ಆರೋಪಿಗಳು ಸಹಕರಿಸಿರುವುದಾಗಿ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ವಾಮೀಜಿ ಬಳಿಗೆ ಹೋಗಲು ಒಪ್ಪದಿದ್ದರೆ ಹಾಸ್ಟೆಲ್ ಸಿಬ್ಬಂದಿ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದರು. ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಮುನ್ನ ಕುಟುಂಬಸ್ಥರಿಗೆ ಸಹಾಯ ಹಸ್ತ ನೀಡಲಾಗುತ್ತಿತ್ತು ಹಾಗೂ ನಂತರ ಲೈಂಗಿಕ ಉದ್ದೇಶಕ್ಕೆ ಬಳಸಿಕೊಂಡಿರುವ ಆರೋಪ ಕೇಳಿಬಂದಿದೆ. ಇದರಿಂದ ನೊಂದ ಹಾಸ್ಟೆಲ್‌ನಿಂದ ಹೊರಬಂದ ಸಂತ್ರಸ್ತೆಯರು ಬೆಂಗಳೂರಿಗೆ ತೆರಳಿದ್ದಾರೆ. ಅಲ್ಲಿ ಒಬ್ಬರು ಇವರನ್ನು ಮೈಸೂರಿನ ಒಡನಾಡಿ ಸಂಸ್ಥೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಲೈಂಗಿಕ ಕ್ರಿಯೆಗೆ ಒಪ್ಪದಿದ್ದರೆ ಹಣ್ಣು ಮತ್ತು ಸಿಹಿಯಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಅತ್ಯಾಚಾರ ನಡೆಸುತ್ತಾರೆ ಎಂದು ದೂರಲಾಗಿದೆ. ಕಿರುಕುಳ ಪ್ರಶ್ನಿಸಿದ ಕಾರಣ ಹಾಸ್ಟೆಲ್‌ನಿಂದ ಹೊರ ಹಾಕಲಾಗುತ್ತಿತ್ತು ಎಂದು ನೊಂದ ವಿದ್ಯಾರ್ಥಿನಿಯರು ತಿಳಿಸಿದ್ದಾರೆ. ಇನ್ನೂ ಈ ಪ್ರಕಣರಣದ ಹಿಂದೆ ಕಾಣದ ಕೈಗಳ ಕೈವಾಡ ಇದ್ದು, ಕೆಲವರು ಪಿತೂರಿ, ಒಳಸಂಚು ನಡೆಸಿದ್ದಾರೆ ಎಂದು ಮುರುಘಾ ಶರಣರು ಅನುಮಾನ ವ್ಯಕ್ತಪಡಿಸಿದ್ದಾರೆ.

ಜಾರ್ಖಂಡ್‌ನಲ್ಲಿ ರಾಜಕೀಯ ಬಿಕ್ಕಟ್ಟು

ರಾಂಚಿ, ಆ. ೨೭: ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಶಾಸಕ ಸ್ಥಾನದ ಭವಿಷ್ಯ ಅನಿಶ್ಚಿತತೆಯಲ್ಲಿರುವಂತೆಯೇ ಜಾರ್ಖಂಡ್‌ನಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದೆ. ಶಾಸಕರ ಕುದುರೆ ವ್ಯಾಪಾರದ ಭೀತಿಯಿಂದ ಸೊರೆನ್ ಮತ್ತು ಆಡಳಿತಾರೂಢ ಶಾಸಕರು ಮೂರು ಬಸ್‌ಗಳಲ್ಲಿ ಕೆಲವು ಅಜ್ಞಾತ ಸ್ಥಳಗಳಿಗೆ ತೆರಳುತ್ತಿರುವುದು ಕಂಡುಬAದಿದೆ. ಸಂಜೆ ಇಲ್ಲಿಂದ ೬೦ ಕಿಮೀ ದೂರದಲ್ಲಿರುವ ರಾಜ್ಯದ ಕುಂತಿ ಜಿಲ್ಲೆಯ ಲಟ್ರಟುವಿನ ಅತಿಥಿ ಗೃಹವೊಂದಕ್ಕೆ ಸ್ಥಳಾಂತರಗೊAಡಿದ್ದಾರೆ ಎಂದು ತಿಳಿದು ಬಂದಿದೆ. ಆಡಳಿತಾರೂಢ ಜೆಎಂಎA- ಕಾಂಗ್ರೆಸ್ - ಆರ್ ಜೆಡಿ ಮೈತ್ರಿ ಸರ್ಕಾರದ ಶಾಸಕರು ಮೂರು ಬಸ್‌ಗಳಲ್ಲಿ ತೆರಳಿದ್ದಾರೆ. ಇವರಿಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪಶ್ಚಿಮ ಬಂಗಾಳ ಅಥವಾ ಛತ್ತೀಸ್ ಗಡಕ್ಕೆ ಈ ಶಾಸಕರನ್ನು ಶಿಫ್ಟ್ ಮಾಡಲಾಗುತ್ತದೆ ಎಂದು ಮೊದಲಿಗೆ ಮೂಲಗಳು ಹೇಳಿದ್ದವು. ಮುಖ್ಯಮಂತ್ರಿ ಹೇಮಂತ್ ಸೊರೆನ್ ನಿವಾಸದಲ್ಲಿ ಶಾಸಕರೊಂದಿಗೆ ಮೂರು ಬಾರಿ ಸರಣಿ ಸಭೆ ನಡೆಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಸಿಎಂ ಸಭೆಯಲ್ಲಿ ತಮ್ಮ ಲಗ್ಗೇಜ್‌ನೊಂದಿಗೆ ಶಾಸಕರು ಕಂಡುಬAದರು.

ಪಿಎಸ್‌ಐ ನೇಮಕಾತಿ ಹಗರಣ - ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಬಂಧನ

ಬೆAಗಳೂರು, ಆ. ೨೭: ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಸಿಐಡಿ ಅಧಿಕಾರಿಗಳು ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಹನುಮಂತ ಅವರನ್ನು ಬಂಧಿಸಿದ್ದಾರೆ. ೫೪೫ ಪಿಎಸ್‌ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬAಧಿಸಿದAತೆ ೧೭ನೇ ಆರೋಪಿಯಾಗಿರುವ ರಚನಾ ಹನುಮಂತಳನ್ನು ಸಿಐಡಿ ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿದೆ. ನೇಮಕಾತಿಯ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ರಚನಾ ಹನುಮಂತ ಮೊದಲ ರ‍್ಯಾಂಕ್ ಪಡೆದಿದ್ದರು. ಅಕ್ರಮ ಪ್ರಕರಣ ಬಯಲಾಗುತ್ತಿದ್ದಂತೆ ರಚನಾ ಮೂರು ತಿಂಗಳಿನಿAದ ನಾಪತ್ತೆಯಾಗಿದ್ದರು. ಇದೀಗ ಶನಿವಾರ ನಗರದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ದಸ್ತಗೀರಸಾಬ್ ಮುಲ್ಲಾ ಅವರ ಎದುರು ಆರೋಪಿಯನ್ನು ಹಾಜರುಪಡಿಸಲಾಯಿತು.

೧೦೦ ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ಬೆಂಗಳೂರು, ಆ. ೨೭: ಕಳೆದ ಮೂರು ವಾರಗಳ ಅವಧಿಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಬೆಂಗಳೂರು ಘಟಕವು ರಾಜ್ಯದಲ್ಲಿ ಎರಡನೇ ಅತಿ ದೊಡ್ಡ ಹೆರಾಯಿನ್ ವಶಪಡಿಸಿಕೊಂಡಿದ್ದು, ಮಾರುಕಟ್ಟೆಯಲ್ಲಿ ಸುಮಾರು ೧೦೦ ಕೋಟಿ ಮೌಲ್ಯದ ೧೪ ಕಿಲೋಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿದೆ. ಇಥಿಯೋಪಿಯಾದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ತೆಲಂಗಾಣ ಮೂಲದವರ ಸರಂಜಾಮುಗಳನ್ನು ವಶಪಡಿಸಿಕೊಂಡ ವೇಳೆ ಹೆರಾಯಿನ್ ಪತ್ತೆಯಾಗಿದೆ. ಮೊನ್ನೆ ಆಗಸ್ಟ್ ೧೯ ರಂದು ನಡೆದ ಜಪ್ತಿ ಇದೀಗ ಬೆಳಕಿಗೆ ಬಂದಿದೆ. ವಿಶ್ವಾಸಾರ್ಹ ಮೂಲಗಳಿಂದ ಈ ಬಗ್ಗೆ ಮಾಹಿತಿ ಸಿಕ್ಕಿದ್ದು, ಇಥಿಯೋಪಿಯನ್ ಏರ್‌ಲೈನ್ಸ್ನಿಂದ ಅಡಿಸ್ ಅಬಾಬಾದಿಂದ ಬೆಂಗಳೂರು ತಲುಪಿದ ೪೫ ವರ್ಷದ ಪ್ರಯಾಣಿಕನನ್ನು ಸಂದೇಹ ಮೇಲೆ ತಡೆದು ಆತನ ಸಾಮಾನು ಸರಂಜಾಮುಗಳನ್ನು ಪರಿಶೀಲನೆ ನಡೆಸಿದಾಗ ಕಪ್ಪು ಬಣ್ಣದ ವಸ್ತುವಿನಲ್ಲಿ ಏನೋ ಮರೆಮಾಚಿಕೊಂಡಿರುವುದು ಕಂಡುಬAತು. ಪರೀಕ್ಷಿಸಿದಾಗ ಹೆರಾಯಿನ್ ಪತ್ತೆಯಾಗಿದೆ. ಅದನ್ನು ದೆಹಲಿಗೆ ವಿಮಾನದಲ್ಲಿ ಕಳ್ಳಸಾಗಣೆ ಮಾಡಲು ಯೋಚಿಸುತ್ತಿದ್ದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ ಟಿಕೆಟ್ ಕಾಯ್ದಿರಿಸುವ ಮೊದಲು ಆತನನ್ನು ತಡೆದು ಬಂಧಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.