ಮಡಿಕೇರಿ, ಆ. ೨೭: ನಗರದ ಗಾಂಧಿ ಮೈದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಭೆ ಸಮಾರಂಭಗಳಲ್ಲಿ ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಲು ‘ವೀಕ್ಷಣಾ ಸಭಾಂಗಣ (ಗ್ಯಾಲರಿ)’ ನಿರ್ಮಾಣದ ಕಾಮಗಾರಿ ಕೈಗೊಳ್ಳುವ ಸಂಬAಧ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಪರಿಶೀಲಿಸಿದರು. ಕಾಮಗಾರಿ ಸಂಬAಧ ಹಲವು ಸಲಹೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ನಗರಸಭಾ ಸದಸ್ಯರಾದ ಮಹೇಶ್ ಜೈನಿ, ಸತೀಶ್, ಅಪ್ಪಣ್ಣ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಇತರರು ಇದ್ದರು.