ಮಡಿಕೇರಿ, ಆ. ೨೮: ತಾಲೂಕಿನ ೩ ಅಂಗನವಾಡಿ ಕಾರ್ಯಕರ್ತೆ ಹಾಗೂ ೯ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೧೫ ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಕಾರ್ಯಕರ್ತೆ ಹುದ್ದೆಗೆ ೧೦ನೇ ತರಗತಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ ೪ ರಿಂದ ೯ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು. ೧೮ ರಿಂದ ೩೫ ವರ್ಷ ವಯೋಮಿತಿಯೊಳಗಿರುವ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ೧೦ ವರ್ಷಗಳ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್‌ಸೈಟ್ ತಿತಿತಿ.ಚಿಟಿgಚಿಟಿತಿಚಿಜiಡಿeಛಿಡಿuiಣ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿಯನ್ನು ಭರ್ತಿ ಮಾಡಬಹುದಾಗಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗಿದ್ದು, ಇತರೇ ಯಾವುದೇ ರೂಪದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: ೦೮೨೭೨-೨೯೫೦೮೭ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಖಾಲಿ ಇರುವ ಕೇಂದ್ರಗಳು ಕುರುಳಿ, ಪದಕಲ್ಲು, ಐಕೂಳ-೨. ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇರುವ ಕೇಂದ್ರಗಳು ಬಲ್ಲಮಾವಟಿ ಟೌನ್, ಕುಂಬಳಚೇರಿ, ಬಲ್ಲಮಾವಟಿ-೧, ಚೇರಂಡೇಟಿ, ಗಾಳಿಬೀಡು-೨, ಮುತ್ತಾರುಮುಡಿ, ಕುಂಬಳಗೇರಿ ಉಕ್ಕುಡ, ವಣಚಲು ಕಾಲೇಜು ಹಿಂಭಾಗ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷಿö್ಮ ಅವರು ತಿಳಿಸಿದ್ದಾರೆ.