ಕುಶಾಲನಗರ, ಆ. ೨೭: ಕುಶಾಲ ನಗರ ನಾಡಪ್ರಭು ಪತ್ತಿನ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ ರೂ. ೧೫ ಲಕ್ಷದ ೫೭ ಸಾವಿರ ಲಾಭಗಳಿಸಿದೆ ಎಂದು ಅಧ್ಯಕ್ಷ ಎಂ.ಕೆ. ದಿನೇಶ್ ತಿಳಿಸಿದ್ದಾರೆ. ಅವರು ಸಂಘದ ಕಚೇರಿ ಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಸಂಘ ಒಂದು ಕೋಟಿ ಹದಿನೈದು ಲಕ್ಷ ಠೇವಣಿ ಹೊಂದಿದ್ದು, ಸಂಘದ ಒಟ್ಟು ದುಡಿಯುವ ಬಂಡವಾಳ ರೂ. ೧ ಕೋಟಿ ೮೯ ಲಕ್ಷ ಇರುತ್ತದೆ ಎಂದು ಮಾಹಿತಿ ನೀಡಿದರು.

ಸಂಘ ಪ್ರಸಕ್ತ ಸಾಲಿನಲ್ಲಿ ‘ಎ’ ತರಗತಿಯಲ್ಲಿ ವರ್ಗೀಕರಣವಾಗಿದ್ದು, ಎಲ್ಲರ ಸಹಕಾರದೊಂದಿಗೆ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದ ಅವರು, ಸದಸ್ಯರ ಬೇಡಿಕೆಗೆ ತಕ್ಕಂತೆ ಜಾಮೀನು ಸಾಲ, ಆಭರಣ ಸಾಲ ಹಾಗೂ ಪಿಗ್ಮಿಸಾಲಗಳನ್ನು ನೀಡುತ್ತಿದೆ. ಸಂಘದ ಸದಸ್ಯ ಎಂ.ಡಿ. ನಾಗರಾಜ ಅವರು ನಿವೇಶನವನ್ನು ಸಂಘಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಸಂಘದ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಸ್ವಂತ ನಿವೇಶನದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಸಂಘವು ಕಳೆದ ಏಳು ವರ್ಷಗಳ ಕಾಲದಲ್ಲಿ ಸತತವಾಗಿ ಲಾಭದಲ್ಲಿ ಮುನ್ನಡೆಯುತ್ತಿದೆ, ಎಲ್ಲಾ ಸದಸ್ಯರ ಸಹಕಾರ ಮತ್ತು ಆಡಳಿತ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಸ್ವಂತ ನಿವೇಶನದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಸಂಘವು ಕಳೆದ ಏಳು ವರ್ಷಗಳ ಕಾಲದಲ್ಲಿ ಸತತವಾಗಿ ಲಾಭದಲ್ಲಿ ಮುನ್ನಡೆಯುತ್ತಿದೆ, ಎಲ್ಲಾ ಸದಸ್ಯರ ಸಹಕಾರ ಮತ್ತು ಆಡಳಿತ ಮಂಡಳಿಯ ಸಿಬ್ಬಂದಿಗಳ ಶ್ರಮ ಇದಕ್ಕೆ ಕಾರಣವಾಗಿದೆ ಎಂದು ತಿಳಿಸಿದ ದಿನೇಶ್, ತಾ. ೨೮ ರಂದು (ಇಂದು) ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ಸಂಘದ ವಾರ್ಷಿಕ ಮಹಾಸಭೆ ನಡೆಯಲಿದೆ. ಸದಸ್ಯರಿಗೆ ಶೇ. ೧೪ ರಷ್ಟು ಡಿವಿಡೆಂಡ್ ನೀಡಲು ನಿಶ್ಚಯಿಸಲಾಗಿದೆ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಉಪಾಧ್ಯಕ್ಷ ಜಿ.ಬಿ. ಜಗದೀಶ್, ಕಾರ್ಯದರ್ಶಿ ಕೆ.ಪಿ. ರಾಜು, ನಿರ್ದೇಶಕರಾದ ಎಂ.ಡಿ. ರಮೇಶ್, ರೇಖಾ ಪ್ರಕಾಶ್, ಕಸ್ತೂರಿ ಮಹೇಶ್, ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಸ್ಮಿತಾ ಇದ್ದರು.