ಪಾಲಿಬೆಟ್ಟ, ಆ. ೨೭: ಭಾರತ ಅಮೃತ ಮಹೋತ್ಸವ ಅಂಗವಾಗಿ ಸ್ವಾತಂತ್ರ‍್ಯ ದಿನಾಚರಣೆಯ ಪ್ರಯುಕ್ತ ಪಾಲಿಬೆಟ್ಟ ಪಟ್ಟಣದಲ್ಲಿ ಸ್ವಚ್ಛತೆ ಮಾಡಿ, ತ್ಯಾಜ್ಯ ಸಂಗ್ರಹಿಸುವ ಮೂಲಕ ಆಟೋ ಚಾಲಕರು ಗಮನ ಸೆಳೆದರು.

ಈ ಸಂದರ್ಭ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಪವನ್, ಗೌರವ ಅಧ್ಯಕ್ಷ ಮೂಕೋಂಡ ವಿಜು ಸುಬ್ರಮಣಿ, ವೈದ್ಯಾಧಿಕಾರಿ ನವೀನ್, ಮಾಜಿ ತಾ.ಪಂ. ಸದಸ್ಯ ಅಜಿತ್ ಕರುಂಬಯ್ಯ ಸೇರಿದಂತೆ ಮತ್ತಿತರರು ಇದ್ದರು.