ಸುಂಟಿಕೊಪ್ಪ, ಆ. ೨೭: ೭೫ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಪ್ರಯುಕ್ತ ಹರದೂರು ಗ್ರಾಮ ಪಂಚಾಯಿತಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಶೇ. ೨೫ರ ನಿಧಿ ಹಾಗೂ ವಿಶೇಷಚೇತನರ ಶೇ. ೫ರ ನಿಧಿಯಡಿ ವೀಲ್‌ಚೇರ್ ಹಾಗೂ ಸೋಲಾರ್ ಲೈಟ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳು ಇದ್ದರು.