ಗೋಣಿಕೊಪ್ಪಲು, ಆ. ೨೭: ಹಾಕಿಯ ತವರೂರು ಕೊಡಗಿನಲ್ಲಿ ಹಾಕಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರಾಷ್ಟç ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಹೊರಹೊಮ್ಮಬೇಕು. ಕೊಡಗಿನಲ್ಲಿ ಹಾಕಿಗೆ ಇನ್ನಷ್ಟು ಪ್ರೋತ್ಸಾಹ ಸಿಗುವಂತಾಗಲಿ ಎಂದು ಕೊಡವ ಎಜುಕೇಷನ್ ಸೊಸೈಟಿಯ ಕಾರ್ಯದರ್ಶಿ ಚೆರಿಯಪಂಡ ರಾಕೇಶ್ ಪೂವಯ್ಯ ಕರೆ ನೀಡಿದರು.
ವೀರಾಜಪೇಟೆ ಕಾವೇರಿ ಕಾಲೇಜು ವತಿಯಿಂದ ಪೊನ್ನಂ ಪೇಟೆಯ ಟರ್ಫ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಹಾಕಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಇವರು ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದರಿಂದ ಮುಂದಿನ ಹಾದಿ ಸುಗಮವಾಗಲಿದೆ. ಇದರಿಂದ ಕ್ರೀಡಾಪಟು ರಾಷ್ಟಿçÃಯ ಹಾಗೂ ಅಂರ್ರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಲು ಅವಕಾಶವಾಗಲಿದೆ. ಕ್ರೀಡೆಯ ತವರೂರು ಕೊಡಗಿನಲ್ಲಿ ಕ್ರೀಡಾ ಪ್ರತಿಭೆಗಳಿಗೆ ಕೊರತೆ ಇಲ್ಲ,
ಪ್ರತಿಭೆಗಳನ್ನು ಗುರುತಿಸಲು ವೇದಿಕೆಗಳು ಹೆಚ್ಚಾಗಿ ನಿರ್ಮಾಣ ವಾಗಬೇಕು. ಇದರಿಂದ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುವಂತಾಗಲಿದೆ. ಈ ನಿಟ್ಟಿನಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ವರ್ಷಂಪ್ರತಿ ವಿವಿಧ ಭಾಗದಲ್ಲಿ ಅಂತರ ಕಾಲೇಜು ಮಟ್ಟದ ಹಾಕಿ ಕ್ರೀಡೆಯನ್ನು ನಡೆಸುತ್ತಿದೆ. ರಾಜ್ಯದ ವಿವಿಧ ಜಿಲ್ಲೆಯಿಂದ ಆಗಮಿಸಿರುವ ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು ಮೈದಾನದಲ್ಲಿ ಪ್ರದರ್ಶಿಸಿ ತಮ್ಮ ಕ್ರೀಡಾ ಕೌಶಲ್ಯ ಮೆರೆಯುವಂತೆ ಕ್ರೀಡಾಪಟುಗಳಿಗೆ ಕರೆ ನೀಡಿದರು.
ವೀರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶಂಕರ್ ನಾರಾಯಣ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ದೈಹಿಕ ಶಿಕ್ಷಕ ಕೆ.ಎಸ್. ತಮ್ಮಯ್ಯ ಮಂಗಳೂರು ವಿಶ್ವವಿದ್ಯಾ ನಿಲಯದ ದೈಹಿಕ ನಿರ್ದೇಶಕ ಡಾ. ಗೇರಾಲ್ಡ್ ಸಂತೋಷ್ ಡಿಸೋಜ ಸೇರಿದಂತೆ ಕಾಲೇಜಿನ ಅಧ್ಯಾಪಕರು ಗಳಾದ ಆನಂದ್ಕಾರ್ಲ, ಸೋಮಣ್ಣ, ಪ್ರಿಯ, ಹೆಲೆನ್ ಭಾಗವಹಿಸಿದ್ದರು. ಪ್ರೊ. ಡಾ. ಮುತ್ತಮ್ಮ ಸ್ವಾಗತಿಸಿ, ಪ್ರೊ. ಅಂಬಿಕ ವಂದಿಸಿ ಕಾರ್ಯಕ್ರಮವನ್ನು ಡಾ. ಕೆ.ಜಿ. ವೀಣಾ ನಿರೂಪಿಸಿದರು.