ಶ್ರೀಮಂಗಲ, ಆ. ೨೭: ಪೊನ್ನಂಪೇಟೆ ತಾಲೂಕು ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘ ಮತ್ತು ಟಿ. ಶೆಟ್ಟಿಗೇರಿಯ ಸಂಭ್ರಮ ಮಹಿಳಾ ಸಾಂಸ್ಕೃತಿಕ-ಕ್ರೀಡಾ ಸಂಘದ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಕಣ್ಣಿನ ತಪಾಸಣೆ ಶಿಬಿರ ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘದ ಸಭಾಂಗಣದಲ್ಲಿ ನಡೆಯಿತು.
ಮಡಿಕೇರಿಯ ಸ್ಮಿತಾ ಐ ಕೇರ್ ನೇತ್ರ ತಜ್ಞ ಡಾ. ಪ್ರಶಾಂತ್ ಅವರು ನೇತ್ರ ತಪಾಸಣೆ ಮಾಡಿ ಅಗತ್ಯ ಚಿಕಿತ್ಸೆ ಮತ್ತು ಸಲಹೆಗಳನ್ನು ನೀಡಿದರು. ಶಿಬಿರದಲ್ಲಿ ೧೩೦ಕ್ಕೂ ಅಧಿಕ ಜನರ ನೇತ್ರ ತಪಾಸಣೆ ಮಾಡಲಾಯಿತು. ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್ ಅವರ ವತಿಯಿಂದ ಅಗತ್ಯ ಇರುವವರಿಗೆ ಉಚಿತವಾಗಿ ಕನ್ನಡಕವನ್ನು ಈ ಸಂದರ್ಭ ವಿತರಿಸಲಾಯಿತು.
ಕಾರ್ಯಕ್ರಮಕ್ಕೆ ಮೊದಲು ಧ್ವಜಾರೋಹಣ ಮಾಡಿ, ರಾಷ್ಟçಗೀತೆ ಹಾಡಲಾಯಿತು.