ಪೊನ್ನಂಪೇಟೆ, ಆ. ೨೮: ಪೊನ್ನಂಪೇಟೆ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರೋತ್ಸವದ ಕಾರ್ಯಕ್ರಮದಲ್ಲಿ ಅತೀ ಚಿಕ್ಕ ವಯಸ್ಸಿನಿಂದ ಭರತನಾಟ್ಯ ಕಲೆಯಲ್ಲಿ ತೊಡಗಿಸಿಕೊಂಡು ೧೫೦ಕ್ಕೂ ಹೆಚ್ಚು ವೇದಿಕೆಗಳಲ್ಲಿ ನೃತ್ಯ ಪ್ರದರ್ಶನ ನೀಡಿ, ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು, ಭರತನಾಟ್ಯ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಪೊನ್ನಂಪೇಟೆಯ ಪ್ರೇಕ್ಷ ಭಟ್‌ಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಪ್ರಶಾಂತ್, ತಾಲೂಕು ಪಂಚಾಯತಿ ಇಓ ಕೆ.ಎಂ. ಅಪ್ಪಣ್ಣ, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷೆ ಗಿರಿಜಾ ವೆಂಕಟೇಶ್, ಉಪಾಧ್ಯಕ್ಷೆ ದಶಮಿ ಸದಾ ಇನ್ನಿತರರು ಇದ್ದರು.