ಸೋಮವಾರಪೇಟೆ, ಆ. ೨೮: ಕೊಡಗು ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗು ಚೌಡ್ಲು ಗ್ರಾಮಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ಜಲಜೀವನ್ ಮಿಷನ್ ಯೋಜನೆ ಶುದ್ಧ ಕುಡಿಯುವ ನೀರು ಘಟಕ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಚೌಡ್ಲು ಗ್ರಾಪಂ ವ್ಯಾಪ್ತಿಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ತಾ. ೨೯ ರಂದು (ಇಂದು) ಒಕ್ಕಲಿಗರ ಸಮುದಾಯ ಭವನದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ ಎಂದು ಪಂಚಾಯಿತಿ ಅಧ್ಯಕ್ಷ ಎನ್.ಟಿ. ಪರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕ ಅಪ್ಪಚ್ಚು ರಂಜನ್, ಸಂಸದ ಪ್ರತಾಪ್ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಅಯನೂರು ಮಂಜುನಾಥ್, ಎಸ್.ಎಲ್. ಬೋಜೇಗೌಡ, ಜೀವ ವೈವಿಧÀ್ಯ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ, ಚೌಡ್ಲು ಗ್ರಾ.ಪಂ. ಉಪಾಧ್ಯಕ್ಷೆ ಜಯಲಕ್ಷಿö್ಮ ಸುಬ್ರಮಣಿ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.