ಮಡಿಕೇರಿ, ಆ.೨೮ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮ ದಿನದ ಅಂಗವಾಗಿ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ಗೌಡ ಹಾನಗಲ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಕಿರಣ್, ಪ್ರಧಾನ ಕಾರ್ಯದರ್ಶಿ ದೇವರಾಜ್, ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಶ್ ಬಿ.ವೈ, ಮಡಿಕೇರಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರಮೋದ್, ಮಡಿಕೇರಿ ನಗರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ದರ್ಶನ್ ಪೆಮ್ಮಯ, ಉಪಾಧ್ಯಕ್ಷ ಲೋಹಿತ್ ಟಿ.ವಿ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.