ವೀರಾಜಪೇಟೆ, ಆ. ೨೭: ಕ್ರೀಡಾಪಟುಗಳು ಅಥ್ಲೀಟ್ ಆಗಿದ್ದರೆ ಮಾತ್ರ ನಾವು ಇತರ ಕ್ರೀಡೆಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯ ಎಂದು ಅಂತರಾಷ್ಟಿçÃಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಹೇಳಿದರು.
ವೀರಾಜಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳ ಹೋಬಳಿ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ೪೨ ಬಾರಿ ಅಂತರಾಷ್ಟಿçÃಯ ಮಟ್ಟದ ರಗ್ಬಿ ಆಟದಲ್ಲಿ ಭಾಗವಹಿಸಿದ್ದೇನೆ. ಆದರೆ ನನ್ನ ಕ್ರೀಡೆಯ ಪ್ರಯಾಣ ಅಥ್ಲೀಟ್ ಆಗಿ ಇದೇ ಮೈದಾನದಿಂದ ಆರಂಭವಾಗಿತ್ತು.
ವೀರಾಜಪೇಟೆ ಜೂನಿಯರ್ ಕಾಲೇಜು ಮೈದಾನ ಅನೇಕ ಜನರ ಕ್ರೀಡಾ ಬದುಕು ಹಸನುಗೊಳಿಸಿ ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟದ ಕ್ರೀಡಾಳುಗಳಾಗಿದ್ದಾರೆ. ಪ್ರತಿಯೊಬ್ಬರು ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ಈ ಕ್ರೀಡಾಕೂಟಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಬೆಂಬಲವಾಗಿರುತ್ತದೆ ಎಂದು ಹೇಳಿದರು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಾ ಬೀಳಗಿ ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರೋಹಿತ್, ತಾಲೂಕು ದೈಹಿಕ ಶಿಕ್ಷಕರ ಸಂಘದ ಪರಿವೀಕ್ಷಕಿ ಗಾಯತ್ರಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್ ಹಾಗೂ ಉಪಾಧ್ಯಕ್ಷ ಮೊಣ್ಣಪ್ಪ, ತಾಲೂಕು ದೈಹಿಕರ ಸಂಘದ ಉಪಾಧ್ಯಕ್ಷ ತಮ್ಮಯ್ಯ ಸಭೆಯನ್ನು ಉದೇಶಿಸಿ ಮಾತನಾಡಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಅನ್ನಮ್ಮ, ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪ್ರತೀಕ ಮತ್ತಿತರರು ಉಪಸ್ಥಿತರಿದ್ದರು.