ಮಡಿಕೇರಿ, ಆ. ೨೯: ೨೦೨೦-೨೧ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಭಾಜನರಾಗಿದ್ದ ಕೊಡಗು ಜಿಲ್ಲೆಯ ಮೂವರು ಕ್ರೀಡಾಪಟುಗಳಿಗೆ ಇಂದು ಏಕಲವ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ರಾಷ್ಟಿçÃಯ ಕ್ರೀಡಾ ದಿನದ ಅಂಗವಾಗಿ ರಾಜ್ಯ ಯುವ ಜನಸೇವಾ ಹಾಗೂ ಕ್ರೀಡಾ ಇಲಾಖೆ ವತಿಯಿಂದ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಜಿಲ್ಲೆಯ ಕ್ರೀಡಾಪಟುಗಳಾದ ಪುದಿಯೊಕ್ಕಡ ಪ್ರಧಾನ್ ಸೋಮಣ್ಣ, ಕೊಕ್ಕಲೇರ ಲೋಪಾಮುದ್ರ ತಿಮ್ಮಯ್ಯ ಹಾಗೂ ಕೆ.ಎಸ್ ಜೀವನ್ ಅವರುಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಕಲವ್ಯ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಕ್ರೀಡಾ ಸಚಿವ ನಾರಾಯಣಗೌಡ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು, ಹಾಕಿ ಕರ್ನಾಟಕ ಕಾರ್ಯದರ್ಶಿ ಎ.ಬಿ. ಸುಬ್ಬಯ್ಯ, ಪ್ರಶಸ್ತಿ ಪಡೆದ ಕ್ರೀಡಾಪಟುಗಳ ಕುಟುಂಬ ಸದಸ್ಯರು ಹಾಗೂ ಇತರರು ಇದ್ದರು.
ಅಂತರರಾಷ್ಟಿçÃಯ ಹಾಕಿ ಆಟಗಾರ ಪ್ರಧಾನ್ ಸೋಮಯ್ಯ ಅವರು ಮೂರ್ನಾಡಿನ ಪುದಿಯೊಕ್ಕಡ ಬೆಲ್ಲು ಸೋಮಯ್ಯ ಹಾಗೂ ಮೀನಾ ಸೋಮಯ್ಯ ಅವರ ಪುತ್ರ. ಅಂತರರಾಷ್ಟಿçÃಯ ಬಾಸ್ಕೆಟ್ ಬಾಲ್ ಆಟಗಾರ್ತಿ ಲೋಪಾಮುದ್ರ ಅವರು ಮುಕ್ಕೋಡ್ಲು ಗ್ರಾಮದ ಮಕ್ಕಂದೂರು ವಿ.ಎಸ್.ಎಸ್.ಎನ್. ಅಧ್ಯಕ್ಷ ಕೊಕ್ಕಲೇರ ಸುಜು ತಿಮ್ಮಯ್ಯ ಹಾಗೂ ಪೂಜಾ ದಂಪತಿಯ ಪುತ್ರಿ, ಅಂತರರಾಷ್ಟಿçÃಯ ಅಥ್ಲೆಟಿಕ್ಸ್ ಪಟು ಕೆ.ಎಸ್. ಜೀವನ್ ಅವರು ಸೋಮವಾರಪೇಟೆಯ ಬೆಳ್ಳೂರು ಗ್ರಾಮದ ಸುರೇಶ್ ಕೆ.ಪಿ. ಹಾಗೂ ಶಕುಂತಲಾ ದಂಪತಿಯ ಪುತ್ರ.