ಪಾಕಿಸ್ತಾನದಲ್ಲಿ ಮಳೆರಾಯನ ಆರ್ಭಟ
ಸುಕ್ಕೂರು, ಆ. ೨೯: ಪಾಕಿಸ್ತಾನ ಕಳೆದ ಒಂದು ದಶಕದಲ್ಲೇ ಅತ್ಯಂತ ಭೀಕರ ಮಾನ್ಸೂನ್ ಪ್ರವಾಹ ಎದುರಿಸುತ್ತಿದ್ದು, ಮಳೆ ಸೃಷ್ಟಿಸಿದ ಅನಾಹುತಗಳಿಂದ ೧೦೦೦ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ. ಲೆಕ್ಕವಿಲ್ಲದಷ್ಟು ಮನೆಗಳು ಕೊಚ್ಚಿಹೋಗಿವೆ, ಪ್ರಮುಖ ಕೃಷಿಭೂಮಿ ನಾಶವಾಗಿದೆ. ಜೂನ್ನಿಂದ ಮಳೆ ಪ್ರಾರಂಭವಾದಾಗಿನಿAದ ಇದುವರೆಗೆ ಮಳೆ ಸಂಬAಧ ಘಟನೆಗಳಲ್ಲಿ ೧,೦೬೧ ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಪ್ರವಾಹದಿಂದ ನದಿಗಳು ತುಂಬಿ ಹರಿಯುತ್ತಿದ್ದು, ರಸ್ತೆಗಳು ಮತ್ತು ಸೇತುವೆಗಳು ಕೊಚ್ಚಿಕೊಂಡು ಹೋಗಿದ್ದು, ಉತ್ತರದ ನೂರಾರು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನದಾದ್ಯಂತ ಜೂನ್ ೧೪ ರಿಂದ ೩,೪೫೧ ಕಿಮೀ ರಸ್ತೆ ಪ್ರವಾಹದ ನೀರಿಗೆ ಕೊಚ್ಚಿ ಹೋಗಿದೆ. ೧೪೯ ಸೇತುವೆಗಳು ಕುಸಿದು ಬಿದ್ದಿವೆ. ೧೭೦ ವಾಣಿಜ್ಯ ಅಂಗಡಿಗಳು, ೯೪೯,೮೫೮ ಮನೆಗಳು ಭಾಗಶಃ ಅಥವಾ ಸಂಪೂರ್ಣವಾಗಿ ನಾಶವಾಗಿವೆ. ೭೧೯,೫೫೮ ಜಾನುವಾರುಗಳನ್ನು ಪ್ರವಾಹ ಆಹುತಿ ಪಡೆದಿದೆ. ಈ ವರ್ಷದ ಪ್ರವಾಹವು ೩೩ ದಶಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ. ಪಾಕಿಸ್ತಾನದ ಬಲೂಚಿಸ್ತಾನ್, ಖೈಬರ್ ಪಖ್ತುನ್ಖ್ವಾ, ಗಿಲ್ಗಿಟ್ ಬಾಲ್ಟಿಸ್ತಾನ್ ಮತ್ತು ಸಿಂಧ್ ಪ್ರಾಂತ್ಯಗಳಲ್ಲಿ ಅತಿ ಹೆಚ್ಚಿನ ಹಾನಿಯಾಗಿದ್ದು, ಕನಿಷ್ಠ ೧೧೦ ಜಿಲ್ಲೆಗಳಲ್ಲಿ ಮಳೆಯ ರೌದ್ರಾವತಾರದಿಂದ ಭೀಕರ ಪ್ರವಾಹ ಉಂಟಾಗಿದೆ. ಅವುಗಳಲ್ಲಿ ೭೨ ಜಿಲ್ಲೆಗಳು ತೀವ್ರ ವಿಪತ್ತಿಗೆ ಒಳಗಾಗಿವೆ. ಮಳೆ, ಪ್ರವಾಹದಲ್ಲಿ ಸಿಲುಕಿದ ೫೧,೨೭೫ ಮಂದಿಯನ್ನು ರಕ್ಷಿಸಲಾಗಿದೆ. ೪೯೮,೪೪೨ ಮಂದಿಯನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಮುರುಘಾ ಶ್ರೀ
ಚಿತ್ರದುರ್ಗ, ಆ. ೨೯: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಬಂಧನ ಭೀತಿ ಎದುರಿಸುತ್ತಿದ್ದು, ಸೋಮವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಮುರುಘಾ ಶ್ರೀಗಳ ಪರ ವಕೀಲರು ಇಂದು ನಿರೀಕ್ಷಣಾ ಜಾಮೀನು ಕೋರಿ ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ ೧ಕ್ಕೆ ನಿಗದಿಪಡಿಸಿದೆ. ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಶ್ರೀಗಳನ್ನು ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದೆ. ಇನ್ನು ತಮ್ಮ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಮುರುಘಾ ಶ್ರೀಗಳು, ನನ್ನ ವಿರುದ್ಧ ಪಿತೂರಿ ನಡೆದಿದೆ. ಇದೇನು ಹೊಸದಲ್ಲ, ಕಳೆದ ೧೫ ವರ್ಷದಿಂದ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿತ್ತು. ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳಿದ್ದಾರೆ.
ರಾಮನಗರದಲ್ಲಿ ಮಳೆರಾಯನ ಆರ್ಭಟ
ರಾಮನಗರ, ಆ. ೨೯: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಮನಗರ ಜಿಲ್ಲೆಯ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಮನಗರದ ಮಾರುತಿ ಬಡಾವಣೆಯಲ್ಲಿ ಭಕ್ಷಿಕೆರೆ ಒಡೆದು ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿರುವುದನ್ನು ಪರಿಶೀಲಿಸಿದ ಮುಖ್ಯಮಂತ್ರಿ, ಕೆರೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಭಕ್ಷಿಕೆರೆ ಒಡೆದು ೧೦೦ ರಿಂದ ೧೫೦ ಮನೆಗಳಿಗೆ ಹಾನಿಯಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಭಕ್ಷಿಕೆರೆ ನಂತರ ರೈತರ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ, ಪರಿಹಾರದ ಭರವಸೆ ನೀಡಿದರು. ಮಳೆಯಿಂದ ಕುಸಿದು ಬಿದ್ದಿರುವ ಮನೆಗಳಿಗೆ ತಕ್ಷಣ ೧ ಲಕ್ಷ ರೂಪಾಯಿ ಹಾಗೂ ಒಟ್ಟಾರೇ ೫ ಲಕ್ಷ ರೂ. ಪರಿಹಾರವನ್ನು ಹಂತ ಹಂತವಾಗಿ ನೀಡಲಾಗುವುದು ಎಂದು ಅವರು ತಿಳಿಸಿದರು. ಮಳೆಯಿಂದ ಬೆಂಗಳೂರು- ಮೈಸೂರು ರಸ್ತೆಯಲ್ಲಿ ಸಮಸ್ಯೆಯಾಗಿದೆ. ಹೆದ್ದಾರಿಯ ಹಲವೆಡೆ ಕಾಲುವೆ ಮುಚ್ಚಿರುವುದರಿಂದ ಈ ಸಮಸ್ಯೆಯಾಗಿದೆ. ಕಾಲುವೆ ತೆರವುಗೊಳಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ. ಅವರು ಕಾಲುವೆ ತೆರವುಗೊಳಿಸುವವರೆಗೂ ನಾವು ಕಾಯುವುದಿಲ್ಲ, ರಾಜ್ಯ ಸರ್ಕಾರವೇ ತೆರವುಗೊಳಿಸಲಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು. ಮಳೆ ಆರ್ಭಟಕ್ಕೆ ಇಂದು ಬಿಡದಿ ಬಳಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ. ಆಲದ ಮರ ಉರುಳಿ ಬಿದ್ದು ತೊರೆದೊಡ್ಡಿ ಗ್ರಾಮದ ಬೋರೇಗೌಡ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಜಿತೇಂದ್ರ ತ್ಯಾಗಿಗೆ ಸುಪ್ರೀಂ ಸೂಚನೆ
ನವದೆಹಲಿ, ಆ. ೨೯: ಹರಿದ್ವಾರದ ಧರ್ಮ ಸಂಸದ್ನಲ್ಲಿ ಪ್ರಚೋದನಕಾರಿ ಭಾಷಣ ಪ್ರಕರಣದ ಆರೋಪಿ ಜಿತೇಂದ್ರ ನಾರಾಯಣ ಸಿಂಗ್ ತ್ಯಾಗಿ ಅಲಿಯಾಸ್ ವಾಸಿಂ ರಿಜ್ವಿಗೆ ಸೆಪ್ಟೆಂಬರ್ ೨ ರೊಳಗೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ. ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬಿವಿ ನಾಗರತ್ನ ಅವರ ಪೀಠ, ಸೆಪ್ಟೆಂಬರ್ ೨ ರೊಳಗೆ ಶರಣಾಗುವಂತೆ ತ್ಯಾಗಿಗೆ ಸೂಚಿಸಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ ೯ಕ್ಕೆ ಮುಂದೂಡಿದೆ. ವಾಪಸ್ ಹೋಗಿ ಶರಣಾಗಿ, ವೈದ್ಯಕೀಯ ಆಧಾರದ ಮೇಲೆ ನೀವು ಜಾಮೀನಿನ ಮೇಲೆ ಮುಂದುವರಿಯಲು ಸಾಧ್ಯವಿಲ್ಲ. ನೀವು ಮುದುಕನಲ್ಲ ಮತ್ತು ನಿಮಗೆ ಕೇವಲ ೫೧ ವರ್ಷ. ಶುಕ್ರವಾರ ಅಥವಾ ಶನಿವಾರದೊಳಗೆ ನೀವು ಶರಣಾಗುತ್ತೀರಿ. ನಾವು ಅದನ್ನು ಮುಂದಿನ ಶುಕ್ರವಾರ ವಿಚಾರಣೆಗೆ ತೆಗೆದುಕೊಳ್ಳುತ್ತೇವೆ ಎಂದು ನ್ಯಾಯಮೂರ್ತಿ ಅಜಯ್ ರಸ್ತೋಗಿ, ಆರೋಪಿಗೆ ಹೇಳಿದ್ದಾರೆ. ಉತ್ತರಾಖಂಡ ಪೊಲೀಸರು ಐಪಿಸಿ ಸೆಕ್ಷನ್ ೧೫೩ ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಸೆಕ್ಷನ್ ೨೯೮ ಅಡಿ ದಾಖಲಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ತ್ಯಾಗಿಗೆ ಜಾಮೀನು ನೀಡಲು ಉತ್ತರಾಖಂಡ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ತ್ಯಾಗಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ಮೇನಲ್ಲಿ ಸುಪ್ರೀಂ ಕೋರ್ಟ್ ವೈದ್ಯಕೀಯ ಕಾರಣಗಳಿಗಾಗಿ ತ್ಯಾಗಿಗೆ ೩ ತಿಂಗಳ ಮಧ್ಯಂತರ ಜಾಮೀನು ನೀಡಿತ್ತು. ಮುಂದೆ ದ್ವೇಷ ಭಾಷಣ ಮಾಡದಂತೆ ಮತ್ತು ಎಲೆಕ್ಟ್ರಾನಿಕ್ ಅಥವಾ ಡಿಜಿಟಲ್ ಅಥವಾ ಸಾಮಾಜಿಕ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ಷರತ್ತು ವಿಧಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ರಫೇಲ್ ಖರೀದಿ ಒಪ್ಪಂದ ಕುರಿತು ಸಲ್ಲಿಸಿದ್ದ ರಿಟ್ ಅರ್ಜಿ ತಿರಸ್ಕಾರ
ನವದೆಹಲಿ, ಆ. ೨೯: ಭಾರತ ಮತ್ತು ಫ್ರಾನ್ಸ್ ದೇಶಗಳ ನಡುವಿನ ೩೬ ರಫೇಲ್ ಜೆಟ್ಗಳ ಖರೀದಿ ಒಪ್ಪಂದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠ, ರಫೇಲ್ ಒಪ್ಪಂದಕ್ಕೆ ಸಂಬAಧಿಸಿದ ಹೊಸ ಸಾಕ್ಷ್ಯಗಳನ್ನು ಸಂಗ್ರಹಿಸಲು ರೋಗೇಟರಿ ಪತ್ರಗಳನ್ನು ನೀಡಲು ನಿರ್ದೇಶನವನ್ನು ನೀಡಬೇಕೆಂದು ವಕೀಲ ಎಂ.ಎಲ್.ಶರ್ಮಾ ಸಲ್ಲಿಸಿದ ಸಲ್ಲಿಕೆಯನ್ನು ಪರಿಗಣಿಸಿತು. ಒಪ್ಪಂದವನ್ನು ತನ್ನ ಪರವಾಗಿ ಪಡೆಯಲು ಮಧ್ಯವರ್ತಿಯೊಬ್ಬರಿಗೆ ಡಸಾಲ್ಟ್ ಏವಿಯೇಷನ್ ಒಂದು ಶತಕೋಟಿ ಯುರೋಗಳನ್ನು ಪಾವತಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದರು. ಹೊಸ ಪಿಐಎಲ್ ಅನ್ನು ಪರಿಗಣಿಸಲು ಪೀಠ ನಿರಾಕರಿಸಿತು. ಈ ಹಿನ್ನೆಲೆಯಲ್ಲಿ ಶರ್ಮಾ ಅವರು ಪಿಐಎಲ್ ಹಿಂಪಡೆಯಲು ನಿರ್ಧರಿಸಿದರು. ಡಿಸೆಂಬರ್ ೧೪, ೨೦೧೮ ರಂದು, ೩೬ ರಫೇಲ್ ಜೆಟ್ಗಳ ಖರೀದಿಗಾಗಿ ಭಾರತ ಮತ್ತು ಫ್ರಾನ್ಸ್ ನಡುವಿನ ಒಪ್ಪಂದವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.